Advertisement

ಪರ್ಯಾಯಕ್ಕೆ ಬಿಗಿ ಪೋಲಿಸ್ ಬಂದೋಬಸ್ತು: ಡ್ರೋನ್ ಹಾರಾಟ ನಿಷೇಧ

09:57 AM Jan 17, 2020 | Team Udayavani |

ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಜ. 17 ಮತ್ತು 18 ರಂದು ನಡೆಯಲಿರುವ ಅದಮಾರು ಸ್ವಾಮೀಜಿಯ ಪರ್ಯಾಯ ಮಹೋತ್ಸವಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಆಗಮಿಸಲಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೋಲಿಸ್ ಭದ್ರತೆಯನ್ನು ಒದಗಿಸಿಲಾಗಿದೆ.

Advertisement

ಈ ಕುರಿತು ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ ಪರ್ಯಾಯ ಉತ್ಸವಕ್ಕೆ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಭಾಗವಹಿಸಲಿದ್ದು, ಅಲ್ಲದೇ ಸದ್ರಿ ಕಾರ್ಯಕ್ರಮಕ್ಕೆ ಇತರ ಕೇಂದ್ರ ಮಂತ್ರಿಗಳ ಜಿಲ್ಲಾ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲೆಯ ಸೂಕ್ಷ್ಮತೆಯನ್ನು ಕಂಡು ಮುಂಜಾಗ್ರತೆಗಾಗಿ ಬಂದೋಬಸ್ತ್ ಕರ್ತವ್ಯಕ್ಕೆ 1-ಎಸ್ಪಿ, 1-ಅಡಿಷನಲ್ ಎಸ್ಪಿ, 8-ಡಿವೈಎಸ್ಪಿ, 23-ಪೊಲೀಸ್ ನಿರೀಕ್ಷಕರು, 65-ಪಿಎಸ್ಐ, 193-ಎಎಸ್ಐ, 289-ಹೆಚ್.ಸಿ ಹಾಗೂ 530 ಪೊಲೀಸ್ ಕಾನ್ಸ್ಟೇಬಲ್ಗಳನ್ನು ಒಟ್ಟು 1110 ಅಧಿಕಾರಿ/ಸಿಬ್ಬಂದಿಯವರುಗಳನ್ನು ಹಾಗೂ 300 ಗೃಹರಕ್ಷಕ ಸಿಬ್ಬಂದಿಯವರನ್ನೂ ಸಹ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲಾಗಿದೆ.

ಅಲ್ಲದೇ 04 ಕೆಎಸ್ಆರ್ಪಿ, 10 ಡಿಎಆರ್, 05 ವಿದ್ವಂಸಕ ಕೃತ್ಯ ಪತ್ತೆ ತಂಡವನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಶ್ರೀ ಕೃಷ್ಣ ಮಠದ ಸುತ್ತಮುತ್ತ ಕಣ್ಗಾವಲಿಗೆ ಸಿಸಿ ಕ್ಯಾಮರಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕರ ಮಾಹಿತಿಗಾಗಿ ಕೃಷ್ಣಮಠದ ವಠಾರ ಮತ್ತು ಸರ್ವೀಸ್ ಬಸ್ ನಿಲ್ದಾಣದ ಬಳಿ ಹೊರಠಾಣೆಗಳನ್ನು ತೆರಯಲಾಗಿದೆ.

ಒಟ್ಟು ನಗರದ 04 ಆಯಕಟ್ಟಿನ ಸ್ಥಳಗಳಲ್ಲಿ (ಅಂಬಾಗಿಲು, ಇಂದ್ರಾಳಿ, ಕುಕ್ಕಿಕಟ್ಟೆ. ಬಲಾಯಿಪಾದೆ ಕ್ರಾಸ್) ಚೆಕ್ ಪೋಸ್ಟ್ ಗಳನ್ನು ತೆರೆದು ದಿನದ 24 ಗಂಟೆಯೂ ಸೂಕ್ತ ಕಣ್ಗಾವಲು ವ್ಯವಸ್ಥೆ ಮಾಡಲಾಗಿದೆ. ಡ್ರೋನ್ ಗಳ ಹಾರಾಟವನ್ನು ನಿಷೇಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next