Advertisement

ದತ್ತು ಮಕ್ಕಳೂ ಅನುಕಂಪದ ಉದ್ಯೋಗಕ್ಕೆ ಅರ್ಹರು: ಹೈಕೋರ್ಟ್‌

08:31 PM Nov 22, 2022 | Team Udayavani |

ಬೆಂಗಳೂರು: ದತ್ತು ಮಕ್ಕಳೂ ಸಹ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್‌ ಆದೇಶ ನೀಡಿದೆ.

Advertisement

ಅನುಕಂಪದ ಉದ್ಯೋಗದ ವಿಚಾರದಲ್ಲಿ ಸ್ವಂತ ಮತ್ತು ದತ್ತು ಮಕ್ಕಳಲ್ಲಿ ತಾರತಮ್ಯ ಅಥವಾ ವ್ಯತ್ಯಾಸ ಮಾಡಿದರೆ ದತ್ತು ತೆಗೆದುಕೊಳ್ಳುವ ಉದ್ದೇಶವೇ ನಿಷ#ಲವಾಗಲಿದೆ ಎಂದೂ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ದತ್ತು ಮಕ್ಕಳಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ ಆದೇಶ ಪ್ರಶ್ನಿಸಿ ಬಾಗಲಕೋಟೆಯ ಬನಹಟ್ಟಿ ತಾಲೂಕಿನ ನಿವಾಸಿ ಎಸ್‌. ಗಿರೀಶ್‌ (32) ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

ಸ್ವತಃ ಮಗ ಅಥವಾ ಮಗಳಾಗಲಿ ಹಾಗೂ ದತ್ತು ಮಗ ಅಥವಾ ಮಗಳಾಗಲಿ, ಅವರು ಮಕ್ಕಳೇ ಆಗಿರುತ್ತಾರೆ. ಇದರಲ್ಲಿ ತಾರತಮ್ಯವಿದೆ ಎಂಬುದಾಗಿ ನ್ಯಾಯಾಲಯ ಒಪ್ಪಿಕೊಂಡರೆ, ದತ್ತು ಸ್ವೀಕಾರದ ಉದ್ದೇಶವೇ ಈಡೇರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ದತ್ತು ಮಕ್ಕಳು ಸಹ ಅನುಕಂಪದ ಆಧಾರದಲ್ಲಿ ಪೋಷಕರ ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.

ದತ್ತು ಮಕ್ಕಳಿಗೆ ಅನುಕಂಪದ ಉದ್ಯೋಗ ನೀಡಲು “ಕರ್ನಾಟಕ ನಾಗರಿಕ ಸೇವೆಗಳು (ಅನುಕಂಪದ ಆಧಾರದಲ್ಲಿ ನೇಮಕಾತಿ) ನಿಯಮಗಳು-1996′ ರಲ್ಲಿ ಅವಕಾಶವಿಲ್ಲ ಎಂಬ ಅಭಿಯೋಜನಾ ಇಲಾಖೆಯ ವಾದವನ್ನು ತಿರಸ್ಕರಿಸಿರುವ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ, ಅಂತಿಮವಾಗಿ ಅನುಕಂಪದ ಉದ್ಯೋಗಕ್ಕಾಗಿ ಮೇಲ್ಮನವಿದಾರ ಗಿರೀಶ್‌ (ದತ್ತುಪುತ್ರ) ಸಲ್ಲಿಸಿರುವ ಅರ್ಜಿಯನ್ನು 12 ವಾರಗಳಲ್ಲಿ ಪರಿಗಣಿಸಬೇಕು ಎಂದು ಇಲಾಖೆಗೆ ಹೈಕೋರ್ಟ್‌ ನಿರ್ದೇಶಿಸಿದೆ.

Advertisement

ಮೃತ ವಿನಾಯಕ ಅವರು ಪತ್ನಿ, ಸ್ವಾಭಾವಿಕ ಪುತ್ರ ಮತ್ತು ಪುತ್ರಿ ಅವರನ್ನು ಹೊಂದಿದ್ದರು. ಅನುಕಂಪದ ಮೇಲೆ ಉದ್ಯೋಗ ನೀಡುವಾಗ ಅರ್ಜಿದಾರರ ಆರ್ಥಿಕ ಸಂಕಷ್ಟವನ್ನು ಪರಿಗಣಿಸಬೇಕಾಗುತ್ತದೆ. ಸ್ವಂತ ಪುತ್ರ ಮೃತಪಟ್ಟ ಕಾರಣಕ್ಕೆ ಮನೆಯ ಜವಾಬ್ದಾರಿ ನೋಡಿಕೊಳ್ಳಲು ಗಿರೀಶ್‌ ಅವರನ್ನು ವಿನಾಯಕ ದತ್ತು ಪಡೆದಿದ್ದಾರೆ. ಅವರ ಸ್ವಾಭಾವಿಕ ಮಗಳಿಗೆ ಅನುಕಂಪದ ಉದ್ಯೋಗ ನೀಡಬೇಕಾಗುತ್ತದೆ. ಆದರೆ, ಆಕೆ ದೈಹಿಕ ಹಾಗೂ ಮಾನಸಿಕ ವಿಕಲಚೇತನರಾಗಿದ್ದರೆ. ಇಂತಹ ಸಂದರ್ಭದಲ್ಲಿ ಮನೆ ಜವಾಬ್ದಾರಿ ಹೊತ್ತಿರುವ ದತ್ತುಪುತ್ರನಿಗೆ ಅನುಕಂಪದ ಉದ್ಯೋಗ ನೀಡಬೇಕಾಗುತ್ತದೆ. ಅನುಕಂಪದ ಉದ್ಯೋಗದ ನಿಯಮಗಳಿಗೆ ತಿದ್ದುಪಡಿ ತಂದಿರುವುದರಿಂದ, ದತ್ತು ಪುತ್ರ ಮತ್ತು ಸ್ವಾಭಾವಿಕ ಪುತ್ರ ನಡುವೆ ತಾರತಮ್ಯ ಮಾಡುವುದು ಸಂವಿಧಾನದ ಪರಿಚ್ಛೇಧ 14ರ (ಸಮಾನತೆಯ ಹಕ್ಕು) ಉಲ್ಲಂಘನೆಯಾಗಲಿದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next