Advertisement

ಜನ, ಜಾನುವಾರು ರಕ್ಷಣೆಗೆ ಮುಂದಾಗಿ

11:25 AM Aug 08, 2020 | Suhan S |

ಮೈಸೂರು: ಜಿಲ್ಲೆಯಲ್ಲಿ ಪ್ರವಾಹ ಆರಂಭ ಹಿನ್ನೆಲೆ ಜನ ಮತ್ತು ಜಾನುವಾರು ರಕ್ಷಣೆಗೆ ತಕ್ಷಣವೇ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಶುಕ್ರವಾರ ಜಿಪಂ ಸಭಾಂಗಣದಲ್ಲಿ ನಡೆದ ಪ್ರವಾಹ ಮತ್ತು ಕೋವಿಡ್‌ ಸಂಬಂಧ ವಿಕೋಪ ನಿರ್ವಹಣೆ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಎಲ್ಲಾ ತಾಲೂಕು ಟಾಸ್ಕ್ ಫೋರ್ಸ್‌ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.  ಸುರಕ್ಷಿತ ಸ್ಥಳಕ್ಕೆ ಜನ ಮತ್ತು ಜಾನುವಾರು ಸ್ಥಳಾಂತರಿಸಲು ಕ್ರಮವಹಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಎಲ್ಲಾ ತಾಲೂಕುಗಳಿಗೂ ನೋಡಲ್‌ ಅಧಿಕಾರಿಗಳಾಗಿ ನಿಯೋಜಿಸಲಾಗಿದ್ದು ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.

ಪ್ರವಾಹ ಮತ್ತು ಕೋವಿಡ್‌ ಕೆಲಸದ ಜೊತೆಗೆ ತಾಲೂಕು ಕಚೇರಿ ನಿಗದಿತ ಕೆಲಸ ನಡೆಯಬೇಕು. ಯಾರೂ ಅನಿವಾರ್ಯ ಪರಿಸ್ಥಿತಿ ಹೊರತುಪಡಿಸಿ ರಜೆ ತೆಗೆದುಕೊಳ್ಳಬಾರದು ಎಂದು ತಾಕೀತು ಮಾಡಿದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಟಿ.  ಸೋಮಶೇಖರ್‌ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆಂದರು.

ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ಕಬಿನಿ, ಕಾವೇರಿ ಮತ್ತು ಲಕ್ಷ್ಮಣ ತೀರ್ಥ ನದಿಗಳು ಹರಿಯುತ್ತಿದ್ದು ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಆ.1 ರಿಂದ ಈವರೆಗೆ ಜಿಲ್ಲೆಯಲ್ಲಿ 66 ಮನೆಗಳಿಗೆ ಹಾನಿಯಾಗಿದೆ. ಒಬ್ಬರು ಮೃತಪಟ್ಟಿದ್ದಾರೆಂದರು.  ಸಿಇಒ ಪ್ರಶಾಂತ್‌ ಕುಮಾರ್‌ ಮಿಶ್ರಾ, ಮಹಾನಗರ ಪಾಲಿಕೆ ಆಯುಕ್ತ ಗುರುದತ್‌ ಹೆಗಡೆ, ಎಸ್ಪಿ ರಿಷ್ಯಂತ್‌, ಅಪರ ಜಿಲ್ಲಾಧಿಕಾರಿ ಬಿ.ಎಸ್‌.ಮಂಜುನಾಥಸ್ವಾಮಿ, ಅಪರ ಪೊಲೀಸ್‌ ವರಿಷ್ಠಾಧಿಕಾರಿ ಶಿವಕುಮಾರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next