Advertisement

ಮುಂದುವರಿದ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ

06:45 AM Dec 10, 2018 | Team Udayavani |

ಬೆಳಗಾವಿ: ರೈತರನ್ನು ಕಡೆಗಣಿಸುತ್ತಿರುವ ಸಿಎಂ ಕುಮಾರಸ್ವಾಮಿ, ರಾಜಕೀಯ ನಾಟಕವಾಡುತ್ತಿದ್ದಾರೆ. ಸಕ್ಕರೆ ಕಾರ್ಖಾನೆ ಮಾಲೀಕರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರು ಶಾಂತಕುಮಾರ ಆರೋಪಿಸಿದರು.

Advertisement

ಶನಿವಾರದಿಂದ ಅಹೋರಾತ್ರಿ ಧರಣಿ ನಡೆಸಿರುವ ರೈತರು, ಭಾನುವಾರವೂ ಜಿಲ್ಲಾಧಿಕಾರಿ ಕಚೇರಿ ಎದುರು ಕರಡಿ ಮಜಲು ಬಾರಿಸುತ್ತ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭಾನುವಾರ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಕುರಬೂರು, ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ರೈತರ ಕಣ್ಣೀರು ಒರೆಸುವ ತಂತ್ರ ನಡೆಸಿದರೂ ಅದು ಪ್ರಯೋಜನವಾಗಿಲ್ಲ. ಕಳೆದ ಅಧಿವೇಶನದಲ್ಲಿ ರೈತರ ಸಮಸ್ಯೆ ಬಗೆಹರಿಸುವುದಾಗಿ ಹೇಳಿ ರೈತರನ್ನು ಬೆಂಬಲಿಸಿದ್ದರು. ಆದರೆ, ಈಗ ಅವರೇ ಸಿಎಂ ಆಗಿದ್ದರೂ ಸಮಸ್ಯೆಗೆ ಸ್ಪಂದಿಸದೆ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರ ಒಡೆತನದ ಕಾರ್ಖಾನೆಯಿಂದಲೇ ಬಾಕಿ ಹಣ ಇನ್ನೂ ರೈತರಿಗೆ ಸಿಕ್ಕಿಲ್ಲ. ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿ ರೈತರಿಗೆ ಅನ್ಯಾಯ ಮಾಡಿದ್ದಾರೆ. ಸರ್ಕಾರಕ್ಕೆ ಯಾವುದೇ ಮಾಲೀಕರು ತಪ್ಪು ಮಾಹಿತಿ ನೀಡಿದರೆ ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಎರಡು ವರ್ಷಗಳ ಶಿಕ್ಷೆ ಹಾಗೂ ದಂಡ ವಿಧಿಸುವಂತಹ ಕಾನೂನು ರೂಪಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next