Advertisement

ಸ್ವಯಂ ಬೆಳೆ ಸಮೀಕ್ಷೆಯಿಂದ ಅನುಕೂಲ

01:47 PM Aug 15, 2020 | Suhan S |

ತುಮಕೂರು: ರೈತರು ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಸ್ವಯಂ ದಾಖಲಿಸುವ ಬೆಳೆ ಸಮೀಕ್ಷೆ ಮೊಬೈಲ್‌ ಆ್ಯಪ್‌ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಶುಕ್ರವಾರ ಚಾಲನೆ ನೀಡಿದರು.

Advertisement

ತಾಲೂಕಿನ ಕೋರ ಹೋಬಳಿಯ ರೈತರೊಬ್ಬರ ಜಮೀನಿನಲ್ಲಿ ಬೆಳೆದ ಬೆಳೆಗಳ ಫೋಟೋ ಅಪ್‌ಲೋಡ್‌ ಮಾಡುವ ಮೂಲಕ ಚಾಲನೆ ನೀಡಿ ರೈತರು ಬೆಳೆದ ಬೆಳೆಯನ್ನು ವೀಕ್ಷಿಸಿದರು.

ಸ್ವಯಂ ಅಪ್‌ಲೋಡ್‌: ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 3 ವರ್ಷಗಳಿಂದ ಬೆಳೆ ಸಮೀಕ್ಷೆ ಮಾಡಲಾಗುತ್ತಿದೆ. ಈ ಮೊದಲು ಆಯಾ ಗ್ರಾಮದ ಪಿಆರ್‌ ಒಗಳು ರೈತರ ಜಮೀನುಗಳಿಗೆ ಬಂದು ಬೆಳೆಯ ಫೋಟೋ ತೆಗೆಯುತ್ತಿದ್ದರು. ಆದರೆ ಪ್ರಸಕ್ತ ವರ್ಷದಿಂದ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಛಾಯಾಚಿತ್ರ ತೆಗೆದು ರೈತರೇ ಸ್ವಯಂ ಅಪ್‌ಲೋಡ್‌ ಮಾಡಬಹುದಾಗಿದೆ ಎಂದು ತಿಳಿಸಿದರು.

ಸಹಾಯಧನ ನೀಡಲು ಉಪಯೋಗ: ಬೆಳೆ ಸಮೀಕ್ಷೆಗಾಗಿ ರೈತರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವಂತಿಲ್ಲ. ರೈತ ತನ್ನ ಜಮೀನಿನಲ್ಲಿ ತಾನು ಬೆಳೆದ ಬೆಳೆಯನ್ನು ತಾನೇ ಸಮೀಕ್ಷೆ ಮಾಡಬಹುದು. ಬೆಳೆ ಸಮೀಕ್ಷೆ ಯಡಿ ಸಂಗ್ರಹವಾಗುವ ಮಾಹಿತಿಯನ್ನು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಸಹಾಯಧನ ನೀಡಲು ಉಪಯೋಗ ವಾಗುತ್ತದೆ ಎಂದು ಅವರು ತಿಳಿಸಿದರು.

ಆ.24 ಕಡೆಯ ದಿನ: ರೈತರು ಕೂಡಲೇ ಕಾರ್ಯಪ್ರವೃತ್ತರಾಗಿ ತಮ್ಮ ಜಮೀನಿನ ಬೆಳೆ ವಿವರಗಳನ್ನು ಮೊಬೈಲ್‌ ಮೂಲಕ ಸ್ವಯಂ ದಾಖಲಿಸಬೇಕು. ಬೆಳೆಗಳ ವಿವರಗಳನ್ನು ದಾಖಲಿಸಲು ಆ.24 ಕಡೆಯ ದಿನವಾಗಿದೆ. ರೈತರು ಇದರ ಸದುಪಯೋಗಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ತಹಶೀಲ್ದಾರ್‌ ಮೋಹನ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜ ಸುಲೋಚನ, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ರಘು ಸೇರಿದಂತೆ ರೈತರು, ಕೃಷಿ ಇಲಾಖೆ ಅಧಿಕಾರಿ, ಸಿಬ್ಬಂದಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next