ಗದಗ: ಭ್ರೂಣಲಿಂಗ ಪತ್ತೆ ಮಾಡುವುದು ಅಪರಾಧ. ಇಂತಹ ಕಾರ್ಯದಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಪಿಸಿ-ಪಿಎನ್‌ಡಿಟಿ ಜಿಲ್ಲಾ ಸಲಹಾ ಸಮಿತಿ ಮತ್ತು ಜಿಲ್ಲಾ ತಪಾಸಣಾ, ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭ್ರೂಣಲಿಂಗ ಪತ್ತೆ ಅಪರಾಧ ಎಂಬುದನ್ನು ಜನಸಾಮಾನ್ಯರಿಗೆ ಜಾಗೃತಿ ಕಾರ್ಯಕ್ರಮಹಮ್ಮಿಕೊಳ್ಳುವ ಮೂಲಕ ಹೆಚ್ಚೆಚ್ಚು ಅರಿವುಮೂಡಿಸಬೇಕು. ಅಲ್ಲದೇ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಸಹ ಈ ಕಾನೂನು ಉಲ್ಲಂಘಿಸಿದಲ್ಲಿ ಇರುವ ಶಿಕ್ಷೆ ಪ್ರಮಾಣದ ಕುರಿತು ಎಚ್ಚರಿಕೆ ನೀಡುವ ಮೂಲಕ ಲಿಂಗ ಪತ್ತೆ ಕಾರ್ಯ ಹೋಗಲಾಡಿಸಬೇಕು ಎಂದರು.
ಜಿಲ್ಲೆಯಲ್ಲಿರುವ ಖಾಸಗಿ, ಸರ್ಕಾರಿ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ನಿಗದಿಪಡಿಸಿರುವ ನಿಯಮ ಪಾಲಿಸುತ್ತಿರುವ ಬಗ್ಗೆ ತಪಾಸಣಾ ತಂಡಗಳು ಆಗಾಗ್ಗೆ ಭೇಟಿ ನೀಡಿ, ಪರಿಶೀಲಿಸಬೇಕು.ಸರ್ಕಾರಿ ನಿಯಮ ಪಾಲಿಸದ ಸಂಸ್ಥೆಗಳನ್ನುಗುರುತಿಸಿ ಪರವಾನಗಿ ರದ್ದು ಪಡಿಸಿ, ಶಿಸ್ತು ಕ್ರಮತೆಗೆದುಕೊಳ್ಳಬೇಕು ಎಂದು ನಿರ್ದೇಶಿಸಿದರು. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಆನಂದ ಕೆ. ಮಾತನಾಡಿ, ಜಿಲ್ಲೆಯಲ್ಲಿ ಲಿಂಗಾನುಪಾತ ಕುರಿತು ಅಧಿಕಾರಿಗಳಿಂದಮಾಹಿತಿ ಪಡೆದು, ಸರ್ಕಾರವು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಜಾರಿಗೆ ತರುವ ಮೂಲಕ ಲಿಂಗ ತಾರತಮ್ಯ ಹೋಗಲಾಡಿಸುತ್ತಿದೆ. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರಯತ್ನಿಸಬೇಕು ಎಂದರು. ಕುಟುಂಬ ಕಲ್ಯಾಣ ಅಧಿಕಾರಿ ಡಾ| ವೈ.ಕೆ. ಭಜಂತ್ರಿ ಮಾತನಾಡಿ, ಜಿಲ್ಲೆಯಲ್ಲಿ 79 ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ನೋಂದಣಿಯಾಗಿದ್ದು,ಆ ಪೈಕಿ 16 ಸ್ಕ್ಯಾನಿಂಗ್ ಸೆಂಟರ್‌ಗಳುಸ್ಥಗಿತಗೊಂಡಿವೆ. 63 ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಲಿವೆ ಎಂದು ಮಾಹಿತಿ ನೀಡಿದರು.
ಭ್ರೂಣ ಹತ್ಯೆ ತಡೆ ಕುರಿತು ಜಾಗೃತಿಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸ್ಕ್ಯಾನಿಂಗ್‌ಸೆಂಟರ್‌ಗಳಲ್ಲಿ ಕರಪತ್ರ ವಿತರಣೆ ಮತ್ತುಬ್ಯಾನರ್ ಅಳವಡಿಸುವ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ| ಸತೀಶಬಸರಿಗಿಡದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಕರೇಗೌಡ್ರ,ಜಿಲ್ಲಾ ಆಯುಷ್ ಅಧಿಕಾರಿ ಡಾ| ಸುಜಾತಾ ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|ಜಗದೀಶ್ ನುಚ್ಚಿನ, ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್,ಚಿಕ್ಕ ಮಕ್ಕಳ ತಜ್ಞರಾದ ಡಾ| ಎಂ.ಬಿ.ನಿಂಬಣ್ಣವರ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಬಿ.ಎಂ. ಗೊಜನೂರ ಸೇರಿದಂತೆ ಆಯಾ ತಾಲೂಕು ಆರೋಗ್ಯಾಧಿಕಾರಿಗಳು ಇದ್ದರು.