Advertisement

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಲು ಸಲಹೆ

06:32 PM Sep 05, 2022 | Team Udayavani |

ಬೀದರ: ಶ್ರಾವಣ ಮಾಸ ನಿಮಿತ್ತ ಜಿಲ್ಲೆಯ ವಿವಿಧೆಡೆ ಹಮ್ಮಿಕೊಂಡಿದ್ದ ಔದತ್ತಪುರದ ಮಚ್ಚೇಂದ್ರನಾಥ ಸ್ವಾಮೀಜಿ ಪ್ರವಚನ ಕಾರ್ಯಕ್ರಮ ಸಂಪನ್ನಗೊಂಡಿತು. ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ಪ್ರವಚನ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಎಲ್ಲರೂ ಸತ್ಯ, ನ್ಯಾಯ, ನೀತಿ, ಧರ್ಮದ ಮಾರ್ಗದಲ್ಲಿ ನಡೆಯಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಬೇಕು ಎಂದರು.

Advertisement

ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್‌ ಚಿದ್ರಿ ಮಾತನಾಡಿ, ಅಧ್ಯಾತ್ಮಿಕ ಕಾರ್ಯಕ್ರಮಗಳಿಂದ ಮಾತ್ರ ಜೀವನದಲ್ಲಿ ಶಾಂತಿ, ನೆಮ್ಮದಿ ಸಿಗಲು ಸಾಧ್ಯವಿದೆ. ಹೀಗಾಗಿ ಅಧ್ಯಾತ್ಮಿಕ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು. ಮಚ್ಚೇಂದ್ರನಾಥ ಸ್ವಾಮೀಜಿ ಅವರ ಪ್ರವಚನ ಕಾರ್ಯಕ್ರಮ ಪ್ರತಿ ವರ್ಷವೂ ಆಯೋಜಿಸಬೇಕು ಎಂದರು.

ಜಿಪಂ ಮಾಜಿ ಸದಸ್ಯ ಬಾಬುರಾವ್‌ ಮಲ್ಕಾಪುರೆ, ನಿವೃತ್ತ ಕೃಷಿ ಅ ಧಿಕಾರಿ ಎಂ.ಎಸ್‌. ಕಟಗಿ, ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ ಮರ್ಜಾಪುರ, ಪ್ರಮುಖರಾದ ಮಾಳಪ್ಪ ಅಡಸಾರೆ, ರತಿಕಾಂತ ಜೋಜನಾ, ಭೀಮಸಿಂಗ್‌, ಡಾ| ಕಾಮಶೆಟ್ಟಿ, ರವಿ ದುರ್ಗೆ, ಸಂತೋಷ ಜೋಳದಾಪಕೆ, ರಾಜು ಚಿಟ್ಟಾ, ನಾಗರಾಜ ಗಾಂಗಂಜ್‌, ಹಣಮಂತ ಮಲ್ಕಾಪುರ ಮೊದಲಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next