Advertisement

ಸರ್ಕಾರ ಸೌಲಭ್ಯ ಸದ್ಬಳಕೆಗೆ ಸಲಹೆ

09:13 AM Jul 27, 2020 | Suhan S |

ಚಿಕ್ಕಬಳ್ಳಾಪುರ: ಸರ್ಕಾರವು ಶಾಲಾ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೌಲಭ್ಯಗಳನ್ನ ಪಡೆದು ವಿದ್ಯಾವಂತರಾಗಿ ಶಾಲೆಗೆ, ಪೋಷಕರಿಗೆ, ಶಿಕ್ಷಕರಿಗೆ ಕೀರ್ತಿ ತರಬೇಕೆಂದು ಸಮಾಜ ಸೇವಕ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯ ಬ್ಯಾಂಕ್‌ ಮಂಜುನಾಥ್‌ ವಿದ್ಯಾರ್ಥಿಗಳಿಗೆ ತಿಳಿಸಿದರು.

Advertisement

ಗೌರಿಬಿದನೂರು ಪಟ್ಟಣದಲ್ಲಿ ಸರ್ಕಾರದಿಂದ ನೀಡಿರುವ ಪಠ್ಯ ಪುಸ್ತಕಗಳನ್ನು ನಗರದ ಎಸ್‌ಎಸ್‌ಇಎ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದ ಅವರು, ಸರ್ಕಾರವು ಸರ್ಕಾರಿ, ಅನುದಾನಿತ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಯಸ್ಸಿಗಾಗಿ ಪ್ರತಿ ವರ್ಷ ಕೋಟ್ಯಂತರ ರೂ. ವೆಚ್ಚದಲ್ಲಿ ಹಲವಾರು ಸೌಲಭ್ಯಗಳನ್ನು ಜಾರಿಗೊಳಿಸುತ್ತಿದೆ ಎಂದರು.

ವಿದ್ಯಾರ್ಥಿಗಳಿಗೆ ಸರ್ಕಾರವು ನೀಡುವ ಸೌಲಭ್ಯಗಳಲ್ಲಿ ಪಠ್ಯ ಪುಸ್ತಕ ವಿತರಣೆಯು ಬಹಳ ಮುಖ್ಯವಾಗಿದೆ. ಸರ್ಕಾರವು ನೀಡುವ ಸೌಲಭ್ಯ ಪಡೆದು ಜ್ಞಾನವಂತರಾಗಿ ಸಮಾಜದಲ್ಲಿ ಉನ್ನತ ಹುದ್ದೆ ಅಲಂಕರಿಸಿ ದೇಶದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಹೇಳಿದರು. ಉಪ ಪ್ರಾಂಶುಪಾಲ ಆಂಜನೇಯ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಬೋಧನೆ ಮಾಡಲು ಪ್ರಜ್ಞಾವಂತ ಶಿಕ್ಷಕರನ್ನು ಆಯ್ಕೆ ಮಾಡುತ್ತಿದೆ. ಕೆಳ ಹಂತದಲ್ಲಿರುವ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಶಿಕ್ಷಕರು ಶ್ರಮಿಸುತ್ತಿದ್ದಾರೆ. ಪೋಷಕರು ಮಕ್ಕಳ ಹಾಜರಾತಿ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಂಡಾಗ ಮಾತ್ರ ಸರ್ಕಾರದ ಯೋಜನೆಗಳು ಫ‌ಲಪ್ರದವಾಗುತ್ತದೆ ಎಂದರು.

ಶಿಕ್ಷಕರಾದ ಎನ್‌.ಕೆ.ಕೆಂಚವೀರ್‌, ಲಕ್ಷ್ಮೀನರಸಪ್ಪ, ಸಂಜೀವರಾಯಪ್ಪ, ಜಿ.ಎನ್‌. ಸನತ್‌ಕುಮಾರ್‌, ಶಾಲಾ ಸಿಬ್ಬಂದಿಗಳಾದ ಅನಿತಮ್ಮ, ಪದ್ಮಾವತಮ್ಮ, ಲಕ್ಷ್ಮಯ್ಯ ಹಾಜರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next