Advertisement

ಎಸ್ಸಿ-ಎಸ್ಟಿ ಅನುದಾನ ಸಮರ್ಪಕ ಬಳಕೆಗೆ ಸಲಹೆ

02:35 PM Jun 26, 2019 | Team Udayavani |

ರೋಣ: ಪಟ್ಟಣ ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ಗಳಲ್ಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ ಅನುದಾನವು ಸಮರ್ಪಕವಾಗಿ ಸದ್ಬಳಕೆಯಾಗಬೇಕು ಎಂದು ದೌರ್ಜನ್ಯ ತಡೆ ಸಮಿತಿ ನೂತನ ನಾಮನಿರ್ದೇಶಿತ ಸದಸ್ಯ ಶಂಕ್ರಪ್ಪ ಕಳಿಗಣ್ಣವರ ಹೇಳಿದರು.

Advertisement

ಮಂಗಳವಾರ ಪಟ್ಟಣದ ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಜರುಗಿದ ದೌರ್ಜನ್ಯ ತಡೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಪಪಂ ಹಾಗೂ ಗ್ರಾಪಂಗಳಲ್ಲಿ ಎಸ್‌ಸಿ, ಎಸ್‌ಟಿ ಕಾಲೋನಿಗಳಿಗೆ ಮೀಸಲಿರುವ ಅನುದಾನ ಬೇರೆ ಕಡೆಗಳಲ್ಲಿ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಅದನ್ನು ತಡೆಗಟ್ಟಲು ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಅಲ್ಲದೆ ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿರುವ ಅನುದಾನವು ಸಮರ್ಪಕವಾಗಿ ಬಳಕೆಯಾಗಬೇಕು. ಎಸ್ಸಿ-ಎಸ್ಟಿ ಮುದಾಯದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

ನಾಮನಿರ್ದೇಶಿತ ಸದಸ್ಯ ದುರಗಪ್ಪ ಸಂದಿಮನಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ದೌರ್ಜನ್ಯ ತಡೆ ಕುರಿತು ಜಾಗೃತಿ ಬಗ್ಗೆ ನಾಮಫಲಕ ಹಾಕಬೇಕು ಎಂದರು.

ತಹಶೀಲ್ದಾರ್‌ ಶರಣಮ್ಮ ಕಾರಿ, ತಾಪಂ ಇಒ ಎಂ.ವಿ. ಚಳಗೇರಿ, ಪಿಎಸ್‌ಐ ಎಲ್.ಕೆ. ಜೂಲಕಟ್ಟಿ, ಬಿಇಒ ಎನ್‌. ನಂಜುಂಡಯ್ಯ, ರೋಣ ಪುರಸಭೆ ವ್ಯವಸ್ಥಾಪಕ ಪರಶುರಾಮ ಶೇರಖಾನ್‌ ಸೇರಿದಂತೆ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next