Advertisement

ಜಾನುವಾರುಗಳಿಗೆ ಲಸಿಕೆ ಹಾಕಿಸಲು ಸಲಹೆ

11:18 AM Jan 29, 2019 | Team Udayavani |

ಯಾದಗಿರಿ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದಲ್ಲಿರುವ ರೈತರು ತಮ್ಮ ಜಾನುವಾರುಗಳಿಗೆ ಸಂರಕ್ಷಣೆ ದೃಷ್ಟಿಯಿಂದ ತಪ್ಪದೇ ಕಾಲುಬಾಯಿ ರೋಗದ ವಿರುದ್ಧ ಲಸಿಕೆ ಹಾಕಿಸಿ ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ ಹೇಳಿದರು.

Advertisement

ಸೋಮವಾರ ಪಶು ಆಸ್ಪತ್ರೆ ಆವರಣದಲ್ಲಿ ಇಲಾಖೆ ಹಮ್ಮಿಕೊಂಡಿದ್ದ 15ನೇ ಸುತ್ತಿನ ಕಾಲುಬಾಯಿ ಜ್ವರದ ವಿರುದ್ಧ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಸಕ್ತ ದಿನಗಳಲ್ಲಿ ಬರಗಾಲ ಉದ್ಗವಿಸಿದೆ. ಇಂತಹ ಸಂದರ್ಭದಲ್ಲಿ ರೈತರ ಜೀವನಾಡಿಯಾಗಿರುವ ಜಾನುವಾರುಗಳ ಆರೋಗ್ಯ ಕಾಪಾಡುವುದು ಎಲ್ಲರ ಕರ್ತವ್ಯ. ಈ ದಿಸೆಯಲ್ಲಿ ಇಲಾಖೆ ಮಹತ್ವದ ಅಭಿಯಾನ ಹಮ್ಮಿಕೊಂಡಿದೆ. ರೈತರು ಅದರ ಲಾಭ ಪಡೆಯಬೇಕೆಂದು ಸಲಹೆ ನೀಡಿದರು.

ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ| ಶರಣಭೂಪಾಲರಡ್ಡಿ ನಾಯ್ಕಲ್‌ ಮಾತನಾಡಿ, ಜಿಲ್ಲೆಯಲ್ಲಿ ಕಾಲುಬಾಯಿ ರೋಗದ ವಿರುದ್ಧ ಲಸಿಕೆ ಹಾಕಲು ಒಟ್ಟು 30 ಪಶುವೈದ್ಯರ ಹಾಗೂ ಲಸಿಕೆ ಹಾಕುವವರ ತಂಡ ರಚಿಸಲಾಗಿದೆ. ಅವರು ರೈತರ ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕುತ್ತಾರೆ ಎಂದು ತಿಳಿಸಿದರು.

ಡಾ| ವಿವೇಕ್‌, ಡಾ| ಸುಶ್ರೂತ್‌, ಡಾ| ಗೀತಾ, ಡಾ| ಜಯಶ್ರೀ, ಡಾ| ಶಿವಮಂಗಲ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next