ಯಾದಗಿರಿ: ಆತ್ಮ ಯೋಜನೆ ರೈತರ ಬೇಡಿಕೆಯಂತೆ ಕಾರ್ಯ ನಿರ್ವಹಿಸುತ್ತದೆ. ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ಹೇಳಿದರು.
ನಗರದ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ 2020-21ನೇ ಸಾಲಿನ ಆತ್ಮ ಯೋಜನೆಯಡಿ ರೈತರು ಮತ್ತು ವಿಜ್ಞಾನಿಗಳ ಸಂವಾದ,ಜೇನು ಸಾಕಾಣಿಕೆ ಹಾಗೂ ತೋಟಗಾರಿಕೆಬೆಳೆಗಳಲ್ಲಿ ನವೀನ ತಾಂತ್ರಿಕತೆಗಳ ಅಳವಡಿಕೆಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆತ್ಮ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದೆ.ಇದರಡಿ ಕೃಷಿ ಮತ್ತು ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶುಸಂಗೋಪನೆ, ಅರಣ್ಯಮತ್ತು ಇತರೆ ಇಲಾಖೆ ಸಮ್ಮುಖದಲ್ಲಿ ರೈತರ ಅವಶ್ಯಕತೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತದೆ ಹಾಗೂ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.
ಉಪ ಕೃಷಿ ನಿರ್ದೇಶಕ ಹಾಗೂ ಯೋಜನಾ ನಿರ್ದೇಶಕ ಡಾ| ಬಾಲರಾಜ ರಂಗರಾವ್ ಮಾತನಾಡಿ, ಕ್ರಿಯಾಯೋಜನೆಯಲ್ಲಿ ಪ್ರತಿಯೊಂದು ಘಟಕಗಳವಿವರ, ರಾಜ್ಯ, ಹೊರರಾಜ್ಯದಲ್ಲಿ ಹಾಗೂ ಜಿಲ್ಲೆಯೊಳಗೆ ತರಬೇತಿ, ಕ್ಷೇತ್ರ ಅಧ್ಯಯನದಪ್ರವಾಸವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದುತಿಳಿಸಿದರು. ಗುಂಪುಗಳ ರಚನೆ ಹಾಗೂ ತರಬೇತಿ, ಪ್ರಾತ್ಯಕ್ಷಿಕೆ, ರೈತ ವಿಜ್ಞಾನಿಗಳಚರ್ಚಾಗೋಷ್ಠಿ ಹಾಗೂ ಕ್ಷೇತ್ರ ಪಾಠ ಶಾಲೆ, ನವೀನ ತಾಂತ್ರಿಕತೆಗಳ ಅಳವಡಿಕೆ, ಶ್ರೇಷ್ಠ ಕೃಷಿಕ ಪ್ರಶಸ್ತಿ ಕಾರ್ಯಕ್ರಮಗಳು ಸೇರಿದಂತೆ ಇತರೆ ಚಟುವಟಿಕೆಗಳ ಬಗ್ಗೆ ಮತ್ತುರೈತರು ಮತ್ತು ವಿಜ್ಞಾನಿಗಳೊಂದಿಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.
ಕೃಷಿ ಪದವೀಧರ, ಪ್ರಗತಿಪರ ರೈತ ಹಾಗೂ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತ ಮಲ್ಲಿಕಾರ್ಜುನಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಜೇನು ಸಾಕಾಣಿಕೆ ಕುರಿತು ಮಾಹಿತಿ ನೀಡಿದರು.ಯಾದಗಿರಿ ತೋಟಗಾರಿಕೆ ವಿಸ್ತರಣಾಶಿಕ್ಷಣ ಘಟಕದ ಕೀಟ ಶಾಸ್ತ್ರಜ್ಞ ಡಾ| ಪ್ರಶಾಂತ ಜೇನು ಸಾಕಾಣಿಕೆ ಮಾಹಿತಿ ತಿಳಿಸಿದರು.
ಪ್ರೊ| ಡಾ| ರೇವಣಪ್ಪ, ತೋಟಗಾರಿಕೆಬೆಳೆಗಳಲ್ಲಿ ನವೀನ ತಾಂತ್ರಿಕತೆಗಳ ಅಳವಡಿಕೆ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಆಯ್ಕೆಯಾದ ರೈತರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಜೇನು ಪೆಟ್ಟಿಗೆಗಳನ್ನು ವಿತರಿಸಲಾಯಿತು. ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್., ಸಹಾಯಕ ಕೃಷಿ ನಿರ್ದೇಶಕಿ ಶ್ವೇತಾ ತಾಳೆಮರದ, ಆತ್ಮ ಸಿಬ್ಬಂದಿ ಡಾ| ಮಹಿಬೂಬಸಾಬ್ ಎಂ. ತಾಲೂಕು ತಾಂತ್ರಿಕ ವ್ಯವಸ್ಥಾಪಕ ರವೀಂದ್ರನಾಗಪ್ಪ, ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಸುಭಾಷ ನಾಟಿಕರ್, ಗುರುಮಠಕಲ್ ರೈತ ಸಂಪರ್ಕ ಕೇಂದ್ರ ಸಿಬ್ಬಂದಿ ಇದ್ದರು.