ಭಾಲ್ಕಿ: ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಬಗ್ಗೆ ಆದ್ಯತೆ ಕೊಡಬೇಕು ಎಂದು ಹಲಬರ್ಗಾದ ಶ್ರೀ ಹಾವಗಿಲಿಂಗೇಶ್ವರ ಶಿವಾಚಾರ್ಯರು ಹೇಳಿದರು.
ತಾಲೂಕಿನ ಜ್ಯಾಂತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಮತ್ತು ಪರಿಸರ ರಕ್ಷಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವಂತರಾಯ ಜಿಡ್ಡೆ, ಇಂದಿನ ಮಕ್ಕಳೇ ನಾಳಿನ ಭವ್ಯ ಭಾರತದ ಪ್ರಜೆಗಳು ಎಂದರು.
ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಪ್ರಕಾಶ ನಿಪ್ಪಾಣಿ ಮಾತನಾಡಿದರು. ಕರವೇ ತಾಲೂಕು ಘಟಕ ಅಧ್ಯಕ್ಷ ಗಣೇಶ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ರಮೇಶ ಚಿದ್ರಿ ಪರಸರ ಸಂರಕ್ಷಣೆ ಬಗ್ಗೆ ಮಾತನಾಡಿದರು. ಮುಖ್ಯ ಶಿಕ್ಷಕ ಭರತಭೂಷಣ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವೇಳೆ ಸನ್ಮಾನಿಸಲಾಯಿತು. ಪದಾಧಿಕಾರಿಗಳ ಇದ್ದರು.