ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಾಡಲೂರು ಸತ್ಯ ನಾರಾಯಣಾಚಾರ್ಯ ಸಲಹೆ ನೀಡಿದರು.
Advertisement
ನಗರದ ಎಸ್.ಎಸ್.ಕೆ.ಬಸವೇಶ್ವರ ಕಲಾ, ವಿಜ್ಞಾನ, ವಾಣಿಜ್ಯ ಸ್ನಾತಕ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲೂಕು ವಕೀಲರ ಸಂಘದ ಆಶ್ರಯದಲ್ಲಿ ಕಾಲೇಜಿನಲ್ಲಿ ನಡೆದಕಾನೂನು ಅರಿವು-ನೆರವು ಹಾಗೂ ಮಾದಕ ವಸ್ತುಗಳ ವ್ಯಸನದಿಂದಾಗುವ ದುಷ್ಪರಿಣಾಮ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಧನೆಗೆ ಉತ್ತಮ ಆರೋಗ್ಯ ಅವಶ್ಯಕವಾಗಿದೆ ಎಂದು ಹೇಳಿದರು.
ಆದರ್ಶ ಮೌಲ್ಯ ಮೈಗೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಸಿಕ್ಕಿರುವ ಸಮಯವನ್ನು ಸರಿಯಾಗಿ ಬಳಸಿಕೊಂಡು ಶ್ರಮ ವಹಿಸಿ ಅಭ್ಯಾಸ ಮಾಡಬೇಕು. ಮೊಬೈಲ್ ಬಳಕೆಯಲ್ಲಿ ಜಾಗುರುಕತೆ ವಹಿಸಬೇಕು ಎಂದು ಹೇಳಿದರು. ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಉಪಾಧ್ಯಾಯ ಮಾತನಾಡಿ, ಕಾನೂನಿನ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ|ಡಿ.ಟಿ.ಅಂಗಡಿ ಮಾತನಾಡಿ, ಯುವಕರು ದೇಶದ ಶಕ್ತಿ ಆಗಿದ್ದಾರೆ. ಅವರು ಯಾವುದೇ ಕಾರಣಕ್ಕೂ ಕೆಟ್ಟ ಚಟಗಳಿಗೆ ಬಲಿಯಾಗಬಾರದು ಎಂದು ಹೇಳಿದರು.
Related Articles
ಸಿವಿಲ್ ನ್ಯಾಯಾಧೀಶ ಚಂದ್ರಯ್ಯ ಬಿ.ಪಿ. ಇದ್ದರು. ಪ್ರೊ| ವಿಠೊಬಾ ಡೊಣ್ಣೆಗೌಡರು ಸ್ವಾಗತಿಸಿದರು. ಡಾ| ಲೀಲಾ ಜಿ.ಎಸ್. ನಿರೂಪಿಸಿದರು. ಪ್ರೊ| ಡಿ.ಎಸ್. ಪಾಟೀಲ ವಂದಿಸಿದರು. ಪ್ರೇರಣಾ ತಿವಾರಿ ಪ್ರಾರ್ಥನಾ ಗೀತೆ ಹಾಡಿದರು. ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Advertisement