ಗದಗ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆಯಾ ಇಲಾಖೆಗಳಿಗೆ ಸಂಬಂಧಪಟ್ಟ ನೀತಿ ಸಿದ್ಧಪಡಿಸಿ, ಭಾಗಿದಾರರಿಗೆ ನೀಡಬೇಕು. ಮುಂದಿನ ಸಭೆಯಲ್ಲಿ ಅಭಿಪ್ರಾಯ, ಅನಿಸಿಕೆ, ಸಲಹೆ, ಸೂಚನೆ ಪಡೆದು ಮಾದರಿ ನಿಯಮಾವಳಿ ರಚಿಸಲಾಗುವುದು. ಮಕ್ಕಳ ರಕ್ಷಣಾ ನಿಯಮಾವಳಿ ರಚನೆಯಲ್ಲಿ ಭಾಗಿದಾರರ ಪಾತ್ರ ಬಹುಮುಖ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ನಿಯಮಾವಳಿಗಳ ರಚನೆ ಉಪ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಕಷ್ಟಕ್ಕೆ ಸಿಲುಕುವ ಮಕ್ಕಳನ್ನು ರಕ್ಷಿಸುವ ಮೂಲಕ ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ನೀತಿ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳಿಗೆ ಸಂಬಂಧಿ ಸಿದ ಇಲಾಖೆ ಹಾಗೂ ಅಪರೋಕ್ಷವಾಗಿ ಮಕ್ಕಳಿಗೆ ನೆರವಾಗುವ ಇಲಾಖೆಗಳು ಜಿಲ್ಲಾ ಮಕ್ಕಳ ರಕ್ಷಣಾ ನಿಯಮಾವಳಿಗಳ ರಚಿಸಲು ಸಲಹೆ ಸೂಚನೆ ನೀಡಬೇಕೆಂದು ತಿಳಿಸಿದರು.
ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯೆ ಜಿ.ಸಿ.ರೇಶ್ಮಿ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಗ್ರಾ.ಪಂ. ಜನಪ್ರತಿನಿಧಿ ಗಳು ಬಾಲ್ಯವಿವಾಹ, ಬಾಲಕಾರ್ಮಿಕತೆ, ಮಕ್ಕಳ ರಕ್ಷಣೆ ಕುರಿತು ಜನ ಜಾಗೃತಿ ಮೂಡಿಸಬೇಕು. ಕೊಳಚೆ ಪ್ರದೇಶದ ನಿವಾಸಿಗಳು, ಮುಖಂಡರಿಗೆ ಭಿಕ್ಷಾಟನೆ ಹಾಗೂ ಚಿಂದಿ ಆಯುವ ಮಕ್ಕಳನ್ನು ರಕ್ಷಿಸಿ, ಶಾಲೆಗೆ ಸೇರಿಸುವಂತೆ ಪ್ರೇರೇಪಿಸುವುದು ಅವಶ್ಯ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಎ. ಮಾತನಾಡಿ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಜಾರಿಯಲ್ಲಿದ್ದು, ಜಿಲ್ಲೆಯಲ್ಲಿ ಮಕ್ಕಳ ಜ್ವಲಂತ ಸಮಸ್ಯೆಗಳು ಪ್ರಾದೇಶಿಕ ಸ್ಥಳೀಯ ಸಮಸ್ಯೆಗಳನ್ನು ಕೇಂದ್ರೀಕರಿಸಿ ನಿಯಮಾವಳಿ ರಚಿಸುವುದು ಮತ್ತು ಅವನ್ನು ಅನುಷ್ಠಾನ ಮಾಡುವಲ್ಲಿ ಸ್ಥಳೀಯ ರಚನೆಗಳ ಸಾಮರ್ಥ್ಯ ಬಲವರ್ಧನೆಗೊಳಿಸಬೇಕು ಎಂದರು.
ಕೃಷಿ, ಬೇಕರಿ, ಹೋಟಲ್, ಇಟ್ಟಂಗಿ ಬಟ್ಟಿಗಳಲ್ಲಿ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವುದು ಕಂಡುಬರುತ್ತಿದ್ದು, ಅದರಿಂದ ಮಕ್ಕಳನ್ನು ಹೊರತರುವಲ್ಲಿ ಜನರಲ್ಲಿ ಅರಿವು ಮೂಡಿಸುವುದು ಅವಶ್ಯಕವಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾ ನೀತಿಯ ವಿಷಯ ಸೇರ್ಪಡೆ ಮಾಡುವಂತೆ ಸ್ಕೌಟ್ಸ್ ಮತ್ತು ಗೈಡ್ಸ್ ಅ ಧಿಕಾರಿಗಳು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿ ಕಾರಿ ಅವಿನಾಶಲಿಂಗ ಗೋಟಖೀಂಡಿ, ಜಿಲ್ಲೆಯ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಜಿಲ್ಲಾ ಮಕ್ಕಳ ರಕ್ಷಣಾ ನೀತಿ ಅವಶ್ಯವಾಗಿದೆ. ಹೀಗಾಗಿ, ಎಲ್ಲಾ ಇಲಾಖೆ ಅ ಧಿಕಾರಿಗಳು ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆ, ವ್ಯಕ್ತಿಗಳು ಸಲಹೆ ಸೂಚನೆಗಳನ್ನು ನೀಡುವ ಮೂಲಕ ಸಮನ್ವಯದಿಂದ ಕಾರ್ಯನಿರ್ವಹಿಸೋಣ ಎಂದು ಅಧಿ ಕಾರಿಗಳಲ್ಲಿ ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅ ಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿ ಗಳು ಇದ್ದರು.