Advertisement

ಜಿಲ್ಲಾ ಮಟ್ಟದಲ್ಲಿ ಸಲಹಾ ಕೋಶ ರಚನೆ

09:21 PM Jul 23, 2019 | Lakshmi GovindaRaj |

ಚಿಕ್ಕಬಳ್ಳಾಪುರ: ಲಿಂಗತ್ವ ಅಲ್ಪಸಂಖ್ಯಾತರನ್ನು ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ಟ್ರಾನ್ಸ್‌ಜೆಂಡರ್ಸ್‌ ನೀತಿಯನ್ನು ಜಾರಿಗೊಳಿಸಿದ್ದು, ಸಮರ್ಪಕ ಅನುಷ್ಠಾನಕ್ಕೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ತಿಳಿಸಿದರು.

Advertisement

ನಗರದ ಜಿಲ್ಲಾಡಳಿತ ಭವನದಲ್ಲಿ ನಡೆದ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ದಮನಿತ ಮಹಿಳೆಯರ ಯೋಜನೆಗಳ ಕುರಿತು ಜಿಲ್ಲಾ ಮಟ್ಟದ ಮತ್ತು ಸಮನ್ವಯ ಕೋಶ ಹಾಗೂ ಟ್ರಾನ್ಸ್‌ಜೆಂಡರ್ಸ್‌ ನೀತಿ, ಪ್ರಧಾನಮಂತ್ರಿ ಮಹಿಳಾ ಸಶಕ್ತಿಕರಣ ಯೋಜನೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಮನಿತ ಮಹಿಳೆಯರ ಅಸಹಾಯಕತೆಯನ್ನು ಹೋಗಲಾಡಿಸುವುದು ಹಾಗೂ ಅವರ ಜೀವನದ ಮಟ್ಟ ಸುಧಾರಣೆ ತರುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಸಲಹಾ ಕೋಶವನ್ನು ರಚಿಸಲಾಗಿದೆ ಎಂದರು.

ಸೌಲಭ್ಯ ಒದಗಿಸಿ: ತೃತೀಯ ಲಿಂಗಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ಟ್ರಾನ್ಸ್‌ ಜೆಂಡರ್ಸ್‌ ನೀತಿ ಜಾರಿಗೊಳಿಸಿದೆ. ಇದರ ಮುಖಾಂತರ ಜಿಲ್ಲೆಯಲ್ಲಿರುವ ತೃತೀಯ ಲಿಂಗಿಗಳನ್ನು ಗುರುತಿಸಿ, ಗುರುತಿನ ಚೀಟಿ ನೀಡುವುದು, ಸರ್ಕಾರದ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕೆ ಎಲ್ಲಾ ಇಲಾಖೆಗಳು ಸಹಕರಿಸಬೇಕೆಂದರು.

ನೇಮಕಾತಿಯಲ್ಲಿ ಮೀಸಲಾತಿ: ಲಿಂಗತ್ವ ಅಲ್ಲಸಂಖ್ಯಾತರಿಗೆ ವಿವಿಧ ಕೌಶಲಾಭಿವೃದ್ಧಿ ತರಬೇತಿ ನೀಡಿ, ಉದ್ಯಮಶೀಲರನ್ನಾಗಿಸಲು ಯೋಜನೆ ರೂಪಿಸಬೇಕಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಯಾವ ರೀತಿ ಮೂಲಭೂತ ಹಕ್ಕುಗಳು ಇವೆಯೋ ಅದೇ ರೀತಿಯಲ್ಲಿ ತೃತೀಯ ಲಿಂಗಿಗಳಿಗೂ ಮೂಲಭೂತ ಹಕ್ಕುಗಳು ದೊರೆಯುವಂತೆ ಮಾಡಬೇಕಾಗಿದೆ ಎಂದರು. ಅವರ ಲಿಂಗತ್ವ ಗುರುತಿಸುವಿಕೆಗೆ ಕಾನೂನಿನ ಅಂಗೀಕಾರ ನೀಡಲು ಹಾಗೂ ಅವರನ್ನು ಸಾಮಾಜಿಕ ಹಾಗೂ ಶೈಷಣಿಕವಾಗಿ ಹಿಂದುಳಿದ ವರ್ಗ ಎಂದು ಪರಿಗಣಿಸಲು ಶಿಕ್ಷಣ ಹಾಗೂ ಸರ್ಕಾರಿ ನೇಮಕಾತಿಗಳ ಪ್ರವೇಶದಲ್ಲಿ ಸಹ ಮೀಸಲಾತಿ ನೀಡಲು ನಿರ್ಧರಿಸಿದೆ

ಸಂಘ ಸಂಸ್ಥೆ, ತಜ್ಞರ ಅಭಿಪ್ರಾಯ: ಲೈಂಗಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಪ್ರತ್ಯೇಕ ಕೇಂದ್ರಗಳನ್ನು ಸಹ ನಿರ್ಮಿಸಲು ನಿರ್ದೇಶಿಸಿರುವ ಹಿನ್ನಲೆಯಲ್ಲಿ ಲೈಂಗಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಪ್ರತ್ಯೇಕ ಕೇಂದ್ರಗಳನ್ನು ಸಹ ನಿರ್ಮಿಸಲು ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ಸರ್ಕಾರವು ವಿವಿಧ ಇಲಾಖೆಗಳೊಂದಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರು, ಸಂಘ ಸಂಸ್ಥೆಗಳು, ತಜ್ಞರುಗಳೊಂದಿಗೆ ಸಮಾಲೋಚನೆ ನಡೆಸಿ ಅವರುಗಳ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದರು. ಸರ್ಕಾರದಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು, ಯಾವುದೇ ಸೌಲಭ್ಯಗಳಿಂದ ಇವರು ವಂಚಿತರಾಗದಂತೆ ನೋಡಿಕಕೊಳ್ಳುವುದು ಎಲ್ಲಾ ಇಲಾಖೆಗಳ ಕರ್ತವ್ಯವಾಗಿರುತ್ತದೆ. ಎಂದರು.

Advertisement

ಫ‌ಲಾನುಭವಿಗಳ ಮಾಹಿತಿ ನೀಡಿ: ಜಿಪಂ ಸಿಇಒ ಗುರುದತ್‌ ಹಗೆಡೆ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರಿಗೆ ವಿವಿಧ ಕೌಶ್ಯಲಾಭಿವೃದ್ಧಿ ತರಬೇತಿಗಳನ್ನು ನಲ್ಮ ಯೋಜನೆಯಡಿ ಅವರುಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯ ಒದಗಿಸಬೇಕು. ನಿವೇಶನ ಹೊಂದಿದ್ದ ಲಿಂಗತ್ವ ಅಲ್ಪಸಂಖ್ಯಾತರಿಗೆ ಆಯಾ ತಾಲೂಕುಗಳಲ್ಲಿ ವಸತಿ ಸೌಕರ್ಯ ಕಲ್ಪಿಸಲು ಕ್ರಮ ವಹಿಸಬೇಕೆಂದು ಫ‌ಲಾನುಭವಿಗಳ ಮಾಹಿತಿಯನ್ನು ನೀಡುವಂತೆ ಲಿಂಗತ್ವ ಅಲ್ಪಸಂಖ್ಯಾತರ ಸಂಸ್ಥೆಗೆ ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂತೋಷ್‌ ಬಾಬು ಮಾತನಾಡಿ, ಯಾವುದೇ ಸಂದರ್ಭದಲ್ಲಿ ತಮ್ಮ ಸಮುದಾಯದವರನ್ನು ಗುರುತಿಸಿದಾಗ ಅವರ ಪೂರ್ಣ ಪ್ರಮಾಣದ ದಾಖಲೆಗಳನ್ನು ಪರಿಶೀಲಿಸಬೇಕು ಅವರು ಬೇರೆ ರಾಷ್ಟ್ರ ಹಾಗೂ ರಾಜ್ಯಗಳಿಂದ ವಲಸೆ ಬಂದಿದಲ್ಲಿ ಅವರ ಮಾಹಿತಿಯನ್ನು ತಕ್ಷಣ ಪೋಲೀಸ್‌ ಇಲಾಖೆಗೆ ತಿಳಿಸಬೇಕು ಎಂದರು. ಸಭೆಯಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್‌.ದೇವರಾಜ್‌ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಲಕ್ಷ್ಮೀ ದೇವಮ್ಮ, ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷರಾದ ಶೋಭಾ ಎ.ಸಿ, ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಒಂದೇ ಕಡೆ ಎಲ್ಲಾ ಸೇವೆ: ಪ್ರಧಾನಮಂತ್ರಿ ಮಹಿಳಾ ಸಶಕ್ತಿಕರಣ ಯೋಜನೆಯಡಿಯಲ್ಲಿ ಕೌಶ್ಯಲಾಭಿವೃದ್ಧಿ ಉದ್ಯೋಗ ಡಿಜಿಟಲ್‌ ಸಾಕ್ಷರತೆ ಆರೋಗ್ಯ ಮತ್ತು ಅಪೌಷ್ಠಿಕತೆಗಳ ಮೂಲಕ ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸಲು ಯಾವುದೇ ಹಸ್ತಕ್ಷೇಪ ಇಲ್ಲದೇ ಸರ್ಕಾರದ ಸೇವೆ ಹಾಗೂ ಯೋಜನೆಗಳನ್ನು ಪಡೆಯಲು ಜಾಗೃತಿ ಮೂಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ತಿಳಿಸಿದರು. ತರಬೇತಿ ನೀಡಿ ಮಹಿಳೆಯರ ಸಾಮರ್ಥ್ಯ ಹೆಚ್ಚಿಸಿ ಅಭಿವೃದ್ಧಿ ಪಡಿಸಿ ಸಬಲೀಕರಣ ಪಡಿಸಲು ಒಂದೇ ಕಡೆ ಎಲ್ಲಾ ಸೇವೆಗಳನ್ನು ನೀಡುವ ಉದೇªಶದಿಂದ ಮಹಿಳಾ ಶಕ್ತಿ ಕೇಂದ್ರ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಗ್ರಾಮೀಣ ಮಳೆಯರಿಗೆ ಸಹಾಯವಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next