Advertisement

ಬಜೆಟ್‌ನಲ್ಲಿ ವಕೀಲ ಸಮುದಾಯ ಕಡೆಗಣನೆ: ಪ್ರತಿಭಟನೆ

07:28 AM Feb 13, 2019 | Team Udayavani |

ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚೆಗೆ ಮಂಡಿಸಿದ ಬಜೆಟ್‌ನಲ್ಲಿ ವಕೀಲ ಸಮುದಾಯವನ್ನು ಕಡೆಗಣಿಸಿವೆ ಎಂದು ಆರೋಪಿಸಿ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಕಿಲರು ಮಂಗಳವಾರ ಪ್ರತಿಭಟನೆ ನಡೆಸಿದರು.

Advertisement

ನಗರದ ನ್ಯಾಯಾಲಯದ ಆವರಣದಿಂದ ವಕೀಲರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಪ್ರತಿಭಟನೆ ನಡೆಸಿದರು. ವಿಶೇಷ ಸರ್ವ ಸದಸ್ಯರ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡಿದ್ದು, ಭಾರತೀಯ ವಕೀಲರ ಪರಿಷತ್‌ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಕೀಲರ ಸಂಘವು ಇದಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜೆ.ಕೆ.ಅನಿಲ್‌ ನೇತೃತ್ವದಲ್ಲಿ ಇತರೆ ಪದಾಧಿಕಾರಿಗಳು ಹಾಗೂ ಸದಸ್ಯರು ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಿ, ಜ.2 ರಂದು ಭಾರತೀಯ ವಕೀಲರ ಪರಿಷತ್‌ ತೆಗೆದುಕೊಂಡ ನಿರ್ಣಯಗಳ ಪ್ರತಿಯನ್ನು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಹಾಗೂ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಅವರಿಗೆ ರವಾನಿಸುವಂತೆ ಮನವಿ ಮಾಡಿಕೊಂಡರು.

ವಕೀಲರ ರಕ್ಷಣೆ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುವಂತೆ ನಿರ್ಣಯವನ್ನು ಸಭೆಯಲ್ಲಿ ಕೈಗೊಂಡರು. ಈ ಪ್ರತಿಭಟನೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಜೆ.ಕೆ.ಅನಿಲ್‌, ಉಪಾಧ್ಯಕ್ಷ ಹರೀಶ್‌ಬಾಬು, ಪ್ರಧಾನ ಕಾರ್ಯದರ್ಶಿ ಬಿ.ಆರ್‌.ದೇವರಾಜು, ಜಂಟಿ ಕಾರ್ಯದರ್ಶಿ ಎನ್‌.ಆರ್‌.ಲೋಕೇಶ್‌, ಕೋಶಾಧ್ಯಕ್ಷ ಆರ್‌.ಪಾತಣ್ಣ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು, ವಕೀಲರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next