Advertisement

ಪ್ರಭುಲಿಂಗ ನಾವದಗಿ ಅಡ್ವೋಕೇಟ್ ಜನರಲ್

12:52 AM Jul 28, 2019 | Sriram |

ಬೆಂಗಳೂರು: ಉದಯ ಹೊಳ್ಳ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಡ್ವೋಕೇಟ್ ಜನರಲ್ ಸ್ಥಾನಕ್ಕೆ ಹಿರಿಯ ವಕೀಲರಾದ ಪ್ರಭುಲಿಂಗ ಕೆ.ನಾವದಗಿ ಅವರನ್ನು ನೇಮಕ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ. ಮೈತ್ರಿ ಸರ್ಕಾರ ಪತನವಾದ ಬೆನ್ನಲ್ಲೇ ಹಿರಿಯ ವಕೀಲ ಉದಯ ಹೊಳ್ಳ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಭುಲಿಂಗ ನಾವದಗಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ನಾವದಗಿ ಅವರು ಹೆಚ್ಚುವರಿ ಸಾಲಿಸಿಟರ್‌ ಜನರಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next