Advertisement
ಭೋವಿ ನಿಗಮದಲ್ಲಿ ಫಲಾನುಭವಿಗಳ ಸೋಗಿನಲ್ಲಿ ಕೋಟ್ಯಂತರ ರೂ. ಸಾಲ ಪಡೆದ ಅವ್ಯವಹಾರ ಸಂಬಂಧ ಕಳೆದ ಎರಡು ವರ್ಷಗಳಿಂದ ಸಿಐಡಿಯು ಪ್ರತ್ಯೇಕ ನಾಲ್ಕು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಪ್ರಕರಣವೊಂದರಲ್ಲಿ ತನಿಖಾಧಿಕಾರಿ ಯಾಗಿದ್ದ ಸಿಐಡಿಯ ಡಿವೈಎಸ್ಪಿ ಕನಕಲಕ್ಷ್ಮೀ ವಿಚಾರಣೆ ನೆಪದಲ್ಲಿ ತನ್ನ ಬಳಿ 25 ಲಕ್ಷ ರೂ.ಗೆ ಬೇಡಿಕೆಯಿಟ್ಟು ಮಾನಸಿಕ ಕಿರುಕುಳ ನೀಡಿದ್ದರು. ಜತೆಗೆ ವಿವಸ್ತ್ರಗೊಳಿಸಿ ಅಮಾನವೀ ಯವಾಗಿ ನಡೆದುಕೊಂಡಿದ್ದರು ಎನ್ನಲಾಗಿದೆ. ಅದರಿಂದ ಮನನೊಂದ ಜೀವಾ ನ.22ರಂದು ಸ್ವಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮೊದಲು ಡೆತ್‌ನೋಟ್ ನಲ್ಲಿ ಡಿವೈಎಸ್ಪಿ ಹೆಸರು ಉಲ್ಲೇಖೀಸಿದ್ದರು.
Advertisement
Advocate Jeeva case: ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಜಾಮೀನು ಅರ್ಜಿ ವಜಾ
12:12 PM Dec 12, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.