Advertisement
ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ಉದ್ಭವಿ ಸಿರುವ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಲು ಎಐಸಿಸಿ ವೀಕ್ಷಕರಾಗಿ ಆಗಮಿ ಸಿದ್ದ ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಮಧುಸೂದನ ಮಿಸಿŒ ಹಾಗೂ ಎಐಸಿಸಿ ಕಾರ್ಯ ದರ್ಶಿ ಭಕ್ತ ಚರಣ ದಾಸ್ ಅವರು ರಾಜ್ಯದ 50 ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಕಳೆದ ಬಾರಿ ವಿಪಕ್ಷ ನಾಯಕನ ಆಯ್ಕೆ ಸಂದರ್ಭದಲ್ಲಿ ಎಲ್ಲರನ್ನೂ ಒಟ್ಟಿಗೆ ಕರೆದು ಅಭಿಪ್ರಾಯ ಸಂಗ್ರಹಿಸಲು ಆಗಮಿಸಿದ ಸಂದರ್ಭದಲ್ಲಿ ಕೆಲವರು ತಂಡವಾಗಿ ಸಿದ್ದರಾಮಯ್ಯ ಪರ ಸಹಿ ಸಂಗ್ರಹ ಮಾಡಿ ವೀಕ್ಷಕರಿಗೆ ನೀಡಿದ್ದ ಬಗ್ಗೆ ರಾಜ್ಯ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಪ್ರತಿಯೊಬ್ಬ ನಾಯಕರಿಂದ ಪ್ರತ್ಯೇಕ ಅಭಿಪ್ರಾಯ ಪಡೆದುಕೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಿರಂತರವಾಗಿ ರಾಜ್ಯದ ಎರಡು ಪ್ರಮುಖ ಸಮುದಾಯಗಳಾದ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯವನ್ನು ನಿರ್ಲಕ್ಷ್ಯ ಮಾಡುತ್ತ ಬಂದಿರುವುದರಿಂದ ಎರಡೂ ಸಮುದಾಯಗಳು ಕಾಂಗ್ರೆಸ್‌ನಿಂದ ದೂರವಾಗುತ್ತಿವೆ. ಅದರಿಂದ ರಾಜ್ಯದಲ್ಲಿ ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ ಎಂದು ಕೆಲವು ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಒಕ್ಕಲಿಗ ಅಥವಾ ಲಿಂಗಾಯತ ಸಮುದಾಯದವರಿಗೆ ನೀಡಿದರೆ ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಅನುಕೂಲವಾಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕೆಲವು ನಾಯಕರು ಒಕ್ಕಲಿಗ ಸಮುದಾಯದ ನಾಯಕರಾಗಿರುವ ಡಿ.ಕೆ. ಶಿವಕುಮಾರ್ ಪರವಾಗಿ ವೀಕ್ಷಕರ ಮುಂದೆ ವಾದ ಮಂಡಿಸಿದ್ದಾರೆ ಎನ್ನಲಾಗಿದೆ.
Related Articles
ಸಿದ್ದರಾಮಯ್ಯನವರು ಆರೋಗ್ಯ ಸಮಸ್ಯೆ ಯಿಂದ ಮನೆಯಲ್ಲಿ ವಿಶ್ರಾಂತಿ ಪಡೆಯು ತ್ತಿರುವುದರಿಂದ ಮಧುಸೂದನ ಮಿಸಿŒ ಹಾಗೂ ಭಕ್ತ ಚರಣ ದಾಸ್ ಅವರ ನಿವಾಸಕ್ಕೆ ತೆರಳಿ ಅವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದರು. ಈ ಸಂದರ್ಭ ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಿದರು ಎನ್ನಲಾಗಿದೆ. ಆದರೆ ಸಿದ್ದರಾಮಯ್ಯ ಅವರು ತಾನು ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯಲು ನಿರಾಕರಿಸಿದ್ದು, ಪಕ್ಷದಲ್ಲಿ ಯುವ ನಾಯಕರಿಗೆ ಅಧಿಕಾರ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Advertisement
ಆದರೆ ಪಕ್ಷದ ಹಿತದೃಷ್ಟಿಯಿಂದ ವಿಪಕ್ಷ ನಾಯಕನ ಸ್ಥಾನದಲ್ಲಿ ಮುಂದುವರಿಯುವಂತೆ ಮಧುಸೂದನ ಮಿಸಿŒ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.