ಬೆಂಗಳೂರು: ಗಡಿಯಲ್ಲಿ ಉಂಟಾಗಿರವ ಪ್ರಕ್ಷುಬ್ದ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಏರ್‌ಪೋರ್ಟ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್, ಜಿಲ್ಲಾ ಎಸ್ಪಿಗಳಿಗೆ ಭದ್ರತೆ ಹೆಚ್ಚಿಸಿಕೊಳ್ಳುವಂತೆ ಸೂಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ಆಸ್ಪದ ಕೊಡಬಾರದು ಎಂದು ಸೂಚಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರೈಲ್ವೆ, ಬಸ್ ಹಾಗೂ ಏರ್ ಪೋರ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆದೇಶಿಸಲಾಗಿದೆ ಎಂದರು.
ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆ: ಮೆಜೆಸ್ಟಿಕ್, ಯಶವಂತಪುರ, ಹುಬ್ಬಳ್ಳಿ, ಮಂಗಳೂರು, ವಿಜಯಪುರ,
ಬೆಳಗಾವಿ ಸೇರಿ ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣದಲ್ಲಿ ಪ್ರತಿನಿತ್ಯ ಶ್ವಾನ ದಳ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ.