Advertisement

90 ಮೀಟರ್ ಎತ್ತರದ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ನಾಳೆ ಲೋಕಾರ್ಪಣೆ

01:00 PM Oct 19, 2022 | Team Udayavani |

ಬೆಂಗಳೂರು: ಇಡೀ ದಕ್ಷಿಣ ಭಾರತದಲ್ಲಿಯೇ ಪ್ರಥಮ ಎನ್ನಲಾದ ಸುಮಾರು 90 ಮೀಟರ್ ಎತ್ತರದವರೆಗೂ ತಲುಪಿ ತುರ್ತು ಅಗ್ನಿಅವಘಡ ಸಂದರ್ಭದಲ್ಲಿ ಬೆಂಕಿ ನಂದಿಸುವ ಹಾಗೂ ಅಪಾಯದಲ್ಲಿ ಸಿಲುಕಿದ ನಾಗರಿಕರನ್ನು ರಕ್ಷಿಸಲು ಸಹಾಯವಾಗುವ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನೀಡಲಾಗುತ್ತಿದೆ.

Advertisement

ಅ.20ರ ಗುರುವಾರ ವಿಧಾನ ಸೌಧದ ಗ್ರಾಂಡ್ ಸ್ಟೆಪ್ ಮುಂಭಾಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲ್ಯಾಡೆರ್ ಪ್ಲಾಟ್ಫಾರ್ಮ್ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಅಗ್ನಿ ಶಾಮಕ ಪಡೆಗೆ ಅತ್ಯಂತ ಅಗತ್ಯವಾದ 90 ಮೀಟರ್ ಎತ್ತರಕ್ಕೆ ನಿಲುಕಲು ಸಾಧ್ಯವಾಗುವ ಏಣಿಯನ್ನು ಫಿನ್ಲ್ಯಾಂಡ್ ನಿಂದ ರಾಜ್ಯ ಸರಕಾರ ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಆಮದು ಮಾಡಿಕೊಂಡು ಸಾರ್ವಜನಿಕರ ಸೇವೆಗೆ ಸಮರ್ಪಿಸುತ್ತಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಬಲಪಡಿಸಲು ಹತ್ತು ಹಲವು ಕ್ರಮಗಳನ್ನು ತೆಗೆದುಕೊಂಡ ಹಿನ್ನೆಲೆ ಪ್ರಸ್ತುತ ಸಾಲಿನಲ್ಲಿ ಸುಮಾರು ಎರಡು ಸಾವಿರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಲ್ಲಿ ಅಗ್ನಿಶಾಮಕ ದಳದ ಸೇವಾ ಘಟಕಗಳನ್ನು ಹೊಂದಿದ್ದು, ಇಲಾಖೆಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next