Advertisement

ನೆರೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಯಡಿಯೂರಪ್ಪ

05:42 PM Aug 06, 2019 | keerthan |

ರಾಯಚೂರು: ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಬಿ. ಎಸ್. ಯಡಿಯೂರಪ್ಪ ಅವರು ರಾಯಚೂರಿಗೆ ಆಗಮಿಸಿದರು.

Advertisement

ಕುರ್ವಾಕುಲ, ಕುರ್ವಾಕುರ್ದಾ ಗ್ರಾಮದ ಬಳಿಯಲ್ಲಿ ಕೃಷ್ಣಾ ನದಿ ಪ್ರವಾಹ ವೀಕ್ಷಿಸಿದ ಸಿಎಂ ಬಳ್ಳಾರಿಯಿಂದ ಹೆಲಿಕಾಪ್ಟರ್ ಮುಖಾಂತರ ರಾಯಚೂರಿಗೆ ಆಗಮಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಯಾವ ರೈತರು ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಮೊದಲು ಆದ್ಯತೆ ರೈತರಿಗೆ ನಾನು ನೀಡುತ್ತೇನೆ ಎಂದು ಭರವಸೆ ನೀಡಿದರು.

ನಾನು ಇವತ್ತು ರಾತ್ರಿ ದೆಹಲಿ ಹೋಗಿ ಮೋದಿ ಅವರನ್ನು ಭೇಟಿಯಾಗುತ್ತೇವೆ. ಪ್ರವಾಹ ಪರಿಹಾರಕ್ಕೆ ಹೆಚ್ಚಿನ‌ ಅನುದಾನ ತರಲು ಪ್ರಯತ್ನಿಸುತ್ತೇನೆ. ಪರಿಸ್ಥಿತಿ ನಿಭಾಯಿಸಲು ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿದೆ ಎಂದರು.

ಪ್ರವಾಹದಿಂದ ಜಿಲ್ಲೆಯಲ್ಲಿ 368 ಹೆಕ್ಟೇರ್ ಬೆಳೆಗೆ ನೀರು ನುಗ್ಗಿದ್ದು, ನೆರೆ ನಿರ್ವಹಣೆಗೆ ಎನ್ ಡಿಆರ್ ಎಫ್ ತಂಡ ಸಕ್ರಿಯವಾಗಿದೆ.

Advertisement

ಹಿಂದೆ 2009ರಲ್ಲಿ ನೆರೆ ಬಂದಾಗ 50 ಹಳ್ಳಿಗಳಿಗೆ ಪುನರ್ವಸತಿ ಕಲ್ಪಿಸಲಾಗಿತ್ತು. ಅಂದು ಮನೆ ನಿರ್ಮಿಸಿಕೊಟ್ಟಿದ್ದಕ್ಕೆ ಇಂದು ಸಮಸ್ಯೆ ಹೆಚ್ಚಾಗಿ ಕಂಡು ಬಂದಿಲ್ಲ. ಅಂದು 11380 ಮನೆಗಳನ್ನು ನಿರ್ಮಿಸಿಕೊಡಲಾಗಿತ್ತು. ಇನ್ನೂ 1086 ಮನೆಗಳ ನಿರ್ಮಾಣ ಬಾಕಿ ಇವೆ. ಶೀಘ್ರವೇ ಅಗತ್ಯ ಅನುದಾನ ನೀಡಿ ಮನೆಗಳ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು

Advertisement

Udayavani is now on Telegram. Click here to join our channel and stay updated with the latest news.

Next