Advertisement
ವೈಮಾನಿಕ ಪ್ರದರ್ಶನ ಸ್ಥಳಾಂತರ ವಿಚಾರದಲ್ಲಿ ಕರ್ನಾಟಕಕ್ಕೆ ಗೆಲುವು ಸಿಕ್ಕಿದ್ದು, 2019ರ ಫೆಬ್ರವರಿಯಲ್ಲಿ ಬೆಂಗಳೂರಿನ ಯಲಂಹಕದ ವಾಯುನೆಲೆಯಲ್ಲಿ ಪ್ರದರ್ಶನ ನಡೆಯಲಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯ ಶನಿವಾರ ಅಧಿಕೃತವಾಗಿ ಮಾಹಿತಿ ನೀಡಿದೆ.
Related Articles
Advertisement
ಇದು ಬರೀ ಶೋ ಅಲ್ಲರಕ್ಷಣಾ ಕ್ಷೇತ್ರದ ಸುಧಾರಿತ ಉತ್ಪನ್ನಗಳ ಪ್ರದರ್ಶನ, ಹೊಸ ಸಂಶೋಧನೆಗಳ ಮಾಹಿತಿ ವಿನಿಮಯ ಹಾಗೂ ವ್ಯವಹಾರ ಉತ್ಪನ್ನಗಳ ಖರೀದಿ, ಮಾರಾಟಕ್ಕೂ ಏರೋ ಶೋ ಸಾಕ್ಷಿ. ಭಾರತೀಯ ಸೇನೆ, ರಕ್ಷಣಾ ವಸ್ತುಗಳ ಪ್ರದರ್ಶನ ಸಂಸ್ಥೆ ಪ್ರತಿ ಎರಡು ವರ್ಷಕ್ಕೊಮ್ಮೆ ಏರ್ಪಡಿಸುವ ವೈಮಾನಿಕ ಪ್ರದರ್ಶನಕ್ಕೆ 22 ವರ್ಷಗಳ ಇತಿಹಾಸ ಇದೆ. ಈವರೆಗೆ 11 ಏರ್ ಶೋ ಯಲಹಂಕದಲ್ಲೇ ನಡೆದಿದೆ. ಎಚ್‌ಎಎಲ್, ಡಿಆರ್‌ಡಿಒ, ಎಡಿಎ, ಬೆಲ್, ಎನ್‌ಎಎಲ್ ಸೇರಿ ರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಲವು ಸಂಸ್ಥೆಗಳ ಜತೆಗೆ ಸ್ಟಾರ್ಟ್‌ಅಪ್ ಸಂಸ್ಥೆಗಳು ಭಾಗವಹಿಸಲಿವೆ. ದೇಶ ವಿದೇಶಗಳ ಯುದ್ಧ ವಿಮಾನ, ಹೆಲಿಕಾಪ್ಟರ್ ನಿಲುಗಡೆಗೆ ಬೇಕಾದ ಹ್ಯಾಂಗರ್ ವ್ಯವಸ್ಥೆ ಬೆಂಗಳೂರು ಹೊರತುಪಡಿಸಿ ದೇಶದ ಬೇರೆಲ್ಲೂ ಇಲ್ಲ. ರಾಜಕೀಯ ಲೆಕ್ಕಾಚಾರ
ಏರೋ ಶೋ ಉತ್ತರ ಪ್ರದೇಶಕ್ಕೆ ಸ್ಥಳಾಂತರ ಮಾಡುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನೆಡೆಯಾಗುವ ಸಾಧ್ಯತೆ ಇದೆ ಎಂಬ ವರದಿ ಹಾಗೂ ಕಾಂಗ್ರೆಸ್, ಜೆಡಿಎಸ್ ಇದನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಳ್ಳಲು ಮುಂದಾಗಿದ್ದರಿಂದ ಬೆಂಗಳೂರಿನಲ್ಲೇ ಏರೋ ಶೋ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಏರೋ ಇಂಡಿಯಾ ಶೋ ಈ ಬಾರಿಯೂ ಬೆಂಗಳೂರಿನಲ್ಲೇ ನಡೆಯಲಿದೆ. ಬೆಂಗಳೂರಿನಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರವಾಗುತ್ತದೆ ಎಂಬ ಸುದ್ದಿ ಆತಂಕ ತಂದಿತ್ತು. ಈಗ ರಕ್ಷಣಾ ಸಚಿವಾಲಯ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಕೇಂದ್ರದ ಈ ನಿರ್ಧಾರ ಖುಷಿ ತಂದಿದೆ.
– ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ವಿನಾಕಾರಣ ಕಾಂಗ್ರೆಸ್ ಮುಖಂಡರು ವಿವಾದ ಸೃಷ್ಟಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಏರೋ ಶೋ ಬೇರೆ ರಾಜ್ಯಕ್ಕೆ ಸ್ಥಳಾಂತರಿಸುತ್ತಿದ್ದಾರೆ ಎಂದು ಅಪಪ್ರಚಾರ ಮಾಡಿದ ಕಾಂಗ್ರೆಸ್ ನಾಯಕರು ಕ್ಷಮೆ ಕೇಳಬೇಕು. ಉದ್ದೇಶ ಪೂರ್ವಕವಾಗಿ ಕೇಂದ್ರ ಸರ್ಕಾರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿ, ಗೊಂದಲ ಸೃಷ್ಟಿಸುತ್ತಿರುವುದು ಈಗ ದೃಢಪಟ್ಟಿದೆ.
– ಬಿ.ಎಸ್.ಯಡಿಯೂರಪ್ಪ, ವಿಧಾನ ಸಭೆ ಪ್ರತಿಪಕ್ಷದ ನಾಯಕ ನಮ್ಮೆಲ್ಲರ ಹೋರಾಟದಿಂದ ಕೇಂದ್ರ ಸರ್ಕಾರ ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ. ಬೆಂಗಳೂರಿನಲ್ಲಿ ಏರ್‌ಶೋ ನಡೆಯಬೇಕೆನ್ನುವುದು ರಾಜಕೀಯ ಉದ್ದೇಶಕ್ಕಲ್ಲ. ಇದೊಂದು ಪ್ರಮುಖ ಕಾರ್ಯಕ್ರಮವಾಗಿದ್ದು, ವಿಶ್ವಮಟ್ಟದಲ್ಲಿ ಬೆಂಗಳೂರು ಗುರುತಿಸಿಕೊಳ್ಳುವಂತೆ ಮಾಡಿದೆ.
– ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷಘಿಆ