ಬೆಂಗಳೂರು: 14 ನೇ ಆವೃತ್ತಿಯ ಏರೋ ಇಂಡಿಯಾ ಶೋ ಉದ್ಘಾಟನೆಗೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಆತ್ಮೀಯವಾಗಿ ಸ್ವಾಗತಿಸಿದರು.
Advertisement
ಪ್ರಧಾನಿ ಆಗಮನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಹಾಜರಿದ್ದರು. ಇಂದು ಪ್ರಧಾನಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ
ಯಲಹಂಕದ ವಾಯು ನೆಲೆಯಲ್ಲಿ ಏರ್ ಶೋ- 2023ನ್ನು ಸೋಮವಾರ ಬೆಳಗ್ಗೆ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ವೈಮಾನಿಕ ಪ್ರದರ್ಶನಕ್ಕೆ ಶನಿವಾರ ಲೋಹದ ಹಕ್ಕಿಗಳ ಪೂರ್ಣ ಪ್ರಮಾಣದ ತಾಲೀಮು ನಡೆಸಲಾಗಿದೆ.