ಕಾಬೂಲ್/ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿರುವ ಅಫ್ಘಾನಿಸ್ತಾನದ ರಾಯಭಾರಿ ನಜಿಬುಲ್ಲಾ ಅಲಿಖಿಲ್ ಅವರ ಮಗಳನ್ನು ಅಪರಿಚಿತ ವ್ಯಕ್ತಿಗಳು ಅಪಹರಿಸಿ ಚಿತ್ರಹಿಂಸೆ ನೀಡಿರುವುದಾಗಿ ಅಫ್ಘಾನಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ:ಇಂದ್ರಜಿತ್ ಅಪ್ಪನಿಗೆ ಹುಟ್ಟಿದ್ದರೆ ದಾಖಲೆ ಬಿಡುಗಡೆ ಮಾಡಲಿ:ದರ್ಶನ್ ಓಪನ್ ಚಾಲೆಂಜ್
ಜಿನ್ನಾ ಸೂಪರ್ ಮಾರ್ಕೆಟ್ ನಿಂದ ಮನೆಗೆ ವಾಪಸ್ ಆಗುತ್ತಿದ್ದ ರಾಯಭಾರಿ ಪುತ್ರಿ ಸಿಲ್ ಸಿಲಾ ಅಲಿಖಿಲ್ (26) ಅಪಹರಣಕ್ಕೊಳಗಾಗಿರುವುದಾಗಿ ವರದಿ ವಿವರಿಸಿದೆ.
ಅಫ್ಘಾನಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆಗೊಳಿಸಿರುವ ಪ್ರಕಟಣೆ ಪ್ರಕಾರ, ಸಿಲ್ ಸಿಲಾಳನ್ನು ಅಪಹರಿಸಿ, ಚಿತ್ರಹಿಂಸೆ ನೀಡಿದ ನಂತರ ಬಿಡುಗಡೆಗೊಳಿಸಿದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ಹೇಳಿದೆ.
ಈ ಪೈಶಾಚಿಕ ಕೃತ್ಯವನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿರುವ ಅಫ್ಘಾನ್ ಸರ್ಕಾರ, ಪಾಕಿಸ್ತಾನದಲ್ಲಿರುವ ಅಫ್ಘಾನ್ ರಾಯಭಾರಿಗಳು ಮತ್ತು ಅವರ ಕುಟುಂಬಗಳ ರಕ್ಷಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಅಂತಾರಾಷ್ಟ್ರೀಯ ಒಪ್ಪಂದ ಮತ್ತು ಬದ್ಧತೆ ಪ್ರಕಾರ ಪಾಕಿಸ್ತಾನ ಸರ್ಕಾರ ಕೂಡಲೇ ಅಫ್ಘಾನ್ ರಾಯಭಾರಿಗಳು ಮತ್ತು ಅವರ ಕುಟುಂಬಕ್ಕೆ ಅಗತ್ಯವಾದ ರಕ್ಷಣೆ ಕಲ್ಪಿಸಿಕೊಡಬೇಕಾಗಿದೆ ಎಂದು ಅಫ್ಘಾನ್ ವಿದೇಶಾಂಗ ಸಚಿವಾಲಯ ತಿಳಿಸಿರುವುದಾಗಿ ವರದಿ ಹೇಳಿದೆ.