Advertisement

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳ ಕಾದಾಟ… ಆಫ್ರಿಕನ್ ಚೀತಾ ‘ಅಗ್ನಿ’ಗೆ ಗಾಯ

02:42 PM Jun 28, 2023 | Team Udayavani |

ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾ ಹಾಗೂ ದಕ್ಷಿಣ ಆಫ್ರಿಕನ್ ಚೀತಾಗಳ ನಡುವೆ ಮಂಗಳವಾರ ಕಾದಾಟ ನಡೆದಿದ್ದು ಇದರಲ್ಲಿ ಒಂದು ಚೀತಾ ಗಾಯಗೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

ಇತ್ತೀಚಿಗೆ ನಮೀಬಿಯಾ ಹಾಗೂ ದಕ್ಷಿಣ ಆಫ್ರಿಕಾದಿಂದ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಹಲವು ಚೀತಾಗಳನ್ನು ತರಲಾಗಿತ್ತು ಅದರಲ್ಲಿ ಕೆಲವು ಅರೋಗ್ಯ ಸಮಸ್ಯೆಯಿಂದ ಮೃತಪಟ್ಟರೆ ನಾಲ್ಕು ಚೀತಾಗಳು ಸೋಮವಾರ ಕಾದಾಟ ನಡೆಸಿದ್ದು ಇದರಲ್ಲಿ ದಕ್ಷಿಣ ಆಫ್ರಿಕಾದ ಗಂಡು ಚೀತಾ ‘ಅಗ್ನಿ’ ಗಾಯಗೊಂಡಿರುವುದಾಗಿ ರಾಷ್ಟ್ರೀಯ ಉದ್ಯಾನವನದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯ ಗಾಯಗೊಂಡ ಚೀತಾಕ್ಕೆ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿದೆ ಎಂದಿದ್ದಾರೆ.

ಭಾರತದಲ್ಲಿ ಅಳಿವಿನಂಚಿನಲ್ಲಿರುವ ಚೀತಾಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನದ ಭಾಗವಾಗಿ ಕಳೆದ ವರ್ಷ ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ನಮೀಬಿಯಾದಿಂದ ತಂದ ಎಂಟು ಚಿರತೆಗಳನ್ನು (5 ಹೆಣ್ಣು ಮತ್ತು 3 ಗಂಡು) ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆ ಮಾಡಿದರು. ಅಷ್ಟು ಮಾತ್ರವಲ್ಲದೆ ಈ ವರ್ಷದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಇನ್ನೂ 12 ಚಿರತೆಗಳನ್ನು ತರಲಾಗಿತ್ತು ಇದರಲ್ಲಿ ನಾಲ್ಕು ಚೀತಾಗಳು ಮೃತಪಟ್ಟಿವೆ.

ಇದನ್ನೂ ಓದಿ: ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಗೆ ಹೃದಯಾಘಾತ… ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರು

Advertisement

Udayavani is now on Telegram. Click here to join our channel and stay updated with the latest news.

Next