ತಿರುವನಂತಪುರಂ: ಈ ತಿಂಗಳ ಆರಂಭದಲ್ಲಿ ಯುಎಇಯಿಂದ ಕೇರಳಕ್ಕೆ ಬಂದ 35 ವರ್ಷದ ವ್ಯಕ್ತಿಯೊಬ್ಬರು ಮಂಕಿ ಫಾಕ್ಸ್ ಗೆ ಪಾಸಿಟಿವ್ ಪರೀಕ್ಷೆ ನಡೆಸಿದ್ದು, ಇದು ದೇಶ ಮತ್ತು ಕೇರಳ ರಾಜ್ಯದಲ್ಲಿ ದೃಢ ಪಟ್ಟ ವೈರಸ್‌ನ ಮೂರನೇ ಪ್ರಕರಣವಾಗಿದೆ.
ಮಲಪ್ಪುರಂ ಮೂಲದವರು ಜುಲೈ 6 ರಂದು ರಾಜ್ಯಕ್ಕೆ ಆಗಮಿಸಿದ್ದು, ಅಲ್ಲಿನ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.
ರೋಗಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಎಲ್ಲರನ್ನೂ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ವಯನಾಡ್ ನಲ್ಲಿ ಆಫ್ರಿಕನ್ ಹಂದಿ ಜ್ವರ ಆತಂಕ
ಕೇರಳದ ವಯನಾಡ್ ಜಿಲ್ಲೆಯ ಮನಂತವಾಡಿಯಲ್ಲಿನ ಎರಡು ತೋಟಗಳಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಭೋಪಾಲ್‌ನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್‌ನಲ್ಲಿ ಮಾದರಿಗಳನ್ನು ಪರೀಕ್ಷಿಸಿದ ನಂತರ ಜಿಲ್ಲೆಯ ಎರಡು ಫಾರ್ಮ್‌ಗಳ ಹಂದಿಗಳಲ್ಲಿ ರೋಗ ದೃಢಪಟ್ಟಿದೆ.