Advertisement

ಯೋಗಿ ಸಿಎಂ ಆಗಿ ಮುಂದುವರಿಯಲ್ಲ, 2022ರ ಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸಮುಖ!

05:51 PM Jun 20, 2021 | Team Udayavani |

ನವದೆಹಲಿ: 2022ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಏತನ್ಮಧ್ಯೆ ಎಲ್ಲಾ ಪಕ್ಷಗಳ ಪ್ರಮುಖ ಪ್ರಶ್ನೆ ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಚರ್ಚೆ ಆರಂಭವಾಗಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಮಧ್ಯಪ್ರದೇಶ ಆಯ್ತು ಈಗ ಪಂಜಾಬ್ ನ ಜಲಂಧರ್ ನಲ್ಲಿ ಗ್ರೀನ್ ಫಂಗಸ್ ಪ್ರಕರಣ ಪತ್ತೆ

ಉತ್ತರಪ್ರದೇಶದ ಕ್ಯಾಬಿನೆಟ್ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಜತೆ ಜೀ ಮೀಡಿಯಾ ನಡೆಸಿದ ವಿಶೇಷ ಮಾತುಕತೆಯಲ್ಲಿ , ಯೋಗಿ ಆದಿತ್ಯನಾಥ್ ಅವರು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಮುಂದುವರಿಯುವುದಿಲ್ಲ ಎಂಬ ಸುಳಿವು ನೀಡಿದ್ದಾರೆ. ಮತ್ತೊಬ್ಬ ವ್ಯಕ್ತಿಯನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಬಿಜೆಪಿ ಆಯ್ಕೆ ಮಾಡಲಿದೆ. ಯಾರಾದರೊಬ್ಬರು ಉತ್ತರಪ್ರದೇಶದ ನೂತನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಅವಕಾಶವನ್ನು ಬಿಜೆಪಿ ಮುಕ್ತವಾಗಿರಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಯೋಗಿ ಆದಿತ್ಯನಾಥ್ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಮುಂದೇನು ನಡೆಯಬಹುದು ಎಂಬುದನ್ನು ನೋಡಬೇಕಾಗಿದೆ. ಬಿಜೆಪಿ ಪ್ರಜಾಪ್ರಭುತ್ವ ಹೊಂದಿರುವ ಪಕ್ಷವಾಗಿದೆ. 2022ರ ಚುನಾವಣೆ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೊಬ್ಬರು ಬರಲಿದ್ದಾರೆ. ಕೇಂದ್ರದ ಹೈಕಮಾಂಡ್ ಮತ್ತು ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲವನ್ನೂ ನಿರ್ಧರಿಸಲಾಗುವುದು ಎಂದು ಮೌರ್ಯ ವಿವರಿಸಿದ್ದಾರೆ.

ಮಹತ್ವದ ಬೆಳವಣಿಗೆಯೊಂದರಲ್ಲಿ ಜನವರಿ ತಿಂಗಳಿನಲ್ಲಿ ಮಾಜಿ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದೀಗ ಎ.ಕೆ.ಶರ್ಮಾ ಅವರನ್ನು ಉತ್ತರಪ್ರದೇಶ ಬಿಜೆಪಿಯ ನೂತನ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅಷ್ಟೇ ಅಲ್ಲ ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಿಕಟವರ್ತಿ ಎಂದು ವಿಶ್ಲೇಷಿಸಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next