ಲಕ್ನೋ: ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಬಿಜೆಪಿ ಸರಕಾರ ಶನಿವಾರಕ್ಕೆ ಎರಡನೇ ಅವಧಿ ಸೇರಿ ಆರು ವರ್ಷಗಳನ್ನು ಪೂರೈಸಿದೆ.
ಮುಖ್ಯಮಂತ್ರಿ ಹುದ್ದೆಯಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಹಿರಿಮೆ ಯೋಗಿ ಆದಿತ್ಯನಾಥ್ ಅವರದಾಗಿದೆ. 30 ವರ್ಷಗಳಲ್ಲಿ ಒಂದೇ ಪಕ್ಷ ಸತತವಾಗಿ ಎರಡನೇ ಅವಧಿಗೆ ಅಧಿಕಾರಕ್ಕೆ ಏರಿರುವುದು ಇದೇ ಮೊದಲು.
2017 ಮಾ.17ರಂದು ಯೋಗಿ ಆದಿತ್ಯನಾಥ್ ಮೊದಲ ಬಾರಿಗೆ ಮುಖ್ಯಮಂತ್ರಿಯಾದರು. 2022ರ ಮಾ.25ರಂದು 2ನೇ ಬಾರಿಗೆ ಅವರು ಮುಖ್ಯಮಂತ್ರಿಯಾದರು.
ಈ ಹಿಂದೆ ಗೂಂಡಾ ರಾಜ್ಯ ಎಂಬ ಕುಖ್ಯಾತಿ ಹೊಂದಿದ್ದ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಲವು ಕಠಿನ ಕ್ರಮಗಳನ್ನು ಕೈಗೊಂಡಿದ್ದಾರೆ.
Related Articles
ಫೆಬ್ರವರಿಯಲ್ಲಿ ಲಕ್ನೋದಲ್ಲಿ ನಡೆದ ಜಾಗತಿಕ ಹೂಡಿಕೆ ಸಮಾವೇಶದಲ್ಲಿ ರಾಜ್ಯಕ್ಕೆ 35 ಲಕ್ಷ ಕೋಟಿ ರೂ. ಹೂಡಿಕೆ ಹರಿದುಬಂದಿದೆ.