Advertisement

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

09:16 AM Jan 06, 2025 | Team Udayavani |

ನವದೆಹಲಿ: ದೆಹಲಿಯ ಕಲ್ಕಾಜಿ ಕ್ಷೇತ್ರದಲ್ಲಿ ತಾನು ಗೆದ್ದರೆ ಕ್ಷೇತ್ರದ ರಸ್ತೆಗಳನ್ನು ಪ್ರಿಯಾಂಕಾ ಗಾಂಧಿ ಅವರ ಕೆನ್ನೆಯಂತೆ ನುಣುಪಾಗಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ರಮೇಶ್ ಬಿಧುರಿ ಇದೀಗ ದೆಹಲಿ ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Advertisement

ಭಾನುವಾರ ತಾನು ಮುಂಬರುವ ಚುನಾವಣೆಯಲ್ಲಿ ಗೆದ್ದರೆ ಕ್ಷೇತ್ರದ ರಸ್ತೆಗಳನ್ನು ಪ್ರಿಯಾಂಕಾ ಗಾಂಧಿ ಅವರ ಕೆನ್ನೆಯಂತೆ ನುಣುಪಾಗಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು ಅಲ್ಲದೆ ಈ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶವನ್ನೂ ಹೊರಹಾಕಿತ್ತು ಇದಾದ ಬೆನ್ನಲೇ ಬಿಧುರಿ ದೆಹಲಿ ಸಿಎಂ ಅತಿಶಿ ಅವರ ವಿರುದ್ಧ ವಿವಾದಾತ್ಮಹ ಹೇಳಿಕೆ ನೀಡಿದ್ದು ಅತಿಶಿ ಅವರು ತಮ್ಮ ತಂದೆಯನ್ನೇ ಬದಲಾಯಿಸಿದ್ದಾರೆ ಎಂದು ಹೇಳಿಕೆ ನೀಡಿದ್ದು ಈ ಹೇಳಿಕೆ ನೀಡಿದ ಬೆನ್ನಲ್ಲೇ ದೆಹಲಿಯ ಆಮ್ ಆದ್ಮಿ ಪಕ್ಷದ ನಾಯಕರು ಕಿಡಿಕಾರಿದ್ದು ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯವಾಗಿ ಮಾತನಾಡುವ ಬಿಧುರಿ ಅವರಿಗೆ ಮುಂಬರುವ ಚುನಾವಣೆಯಲ್ಲಿ ಮತದಾರರೇ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಬಿಧುರಿ ಅವರು ಪ್ರಸ್ತುತ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಅತಿಶಿ ಪ್ರತಿನಿಧಿಸುತ್ತಿರುವ ಕಲ್ಕಾಜಿ ಕ್ಷೇತ್ರದಿಂದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಅದರಂತೆ ಭಾನುವಾರ ದೆಹಲಿಯ ರೋಹಿಣಿಯಲ್ಲಿ ರಾಲಿ ನಡೆಸಿ ಮಾತನಾಡುವ ವೇಳೆ ದೆಹಲಿ ಮುಖ್ಯಮಂತ್ರಿ ಅತಿಶಿ ಅವರಿಗೆ ಅವರ ಪೋಷಕರು ಅತಿಶಿ ಮಾರ್ಲೆನಾ ಎಂಬ ಹೆಸರು ಇಟ್ಟಿದ್ದರು ಆದರೆ ಅತಿಷಿ ಅವರು ತಮ್ಮ ಹೆಸರನ್ನು ಅತಿಶಿ ಎಂದಷ್ಟೇ ಬರೆದುಕೊಳ್ಳುತ್ತಿದ್ದರು ಆದರೆ ಕೆಲವು ಸಮಯದ ಅತಿಶಿ ಸಿಂಗ್ ಎಂದೂ ಕರೆದುಕೊಂಡಿದ್ದರು.

ಬಿಧುರಿ ಅವರ ಹೇಳಿಕೆಗೆ ಕಾಂಗ್ರೆಸ್ ಹಾಗೂ ಆಪ್ ನಾಯಕರು ಕಿಡಿಕಾರಿದ್ದಾರೆ.

Advertisement

ಇದನ್ನೂ ಓದಿ: India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

Advertisement

Udayavani is now on Telegram. Click here to join our channel and stay updated with the latest news.

Next