Advertisement
ನೆರೆಯಿಂದಾಗಿ ಎರಡು ವರ್ಷಗಳ ಹಿಂದೆ ಜಿಲ್ಲೆಗೆ ದೊರೆತಿದ್ದ ಬಯಲುಶೌಚ ಮುಕ್ತ ಜಿಲ್ಲೆ ಎಂಬ ಪಟ್ಟವೂ ನೀರಿನಲ್ಲಿ ತೇಲಿಕೊಂಡು ಹೋಗಿದೆ. ಹೀಗಾಗಿ ಬಯಲು ಶೌಚಮುಕ್ತ ಜಿಲ್ಲೆ ಎಂಬ ಘೋಷಣೆ ಈಗ ದಾಖಲೆಗಷ್ಟೇ ಸೀಮಿತವಾಗಿದೆ.
Related Articles
Advertisement
ಇದರ ಸಮೀಕ್ಷೆ ಕಾರ್ಯವನ್ನು ನಂತರ ಕೈಗೊಳ್ಳಲಾಗುತ್ತಿದೆ. ಸಮೀಕ್ಷೆ ಕಾರ್ಯ ಪೂರ್ಣಗೊಂಡ ನಂತರ ಮತ್ತೆ ಶೌಚಾಲಯಗಳ ನಿರ್ಮಾಣಕ್ಕೆ ಹೊಸದಾಗಿ ಸಹಾಯಧನ ನೀಡಬೇಕೇ ಎಂಬುದರ ಬಗ್ಗೆ ಪರಿಶೀಲಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ ಎಂಬುದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಂದ್ರ ಕೆ.ವಿ.ಅವರ ಹೇಳಿಕೆ.
ನೆರೆ ಹಾವಳಿಯಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಬಹುತೇಕ ಕಡೆ ಸಾಕಷ್ಟು ಸಂಖ್ಯೆಯಲ್ಲಿಮನೆಗಳು ಬಿದ್ದಿದ್ದರಿಂದ ಅದರೊಂದಿಗೆ ಕಟ್ಟಿದ್ದ ಶೌಚಾಲಯಗಳು ಸಹ ನೆಲಕಚ್ಚಿವೆ. ಇದರಿಂದ ಜನರಿಗೆ ಬಹಳ ತೊಂದರೆಯಾಗಿರುವದು ಸರಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಎರಡನೇ ಹಂತದಲ್ಲಿ ಕಾರ್ಯಕ್ರಮ ಆರಂಭಿಸಲಾಗುತ್ತಿದೆ. ಈ ಕಾರ್ಯಕ್ರಮದಡಿ ಶೌಚಾಲಯ ನಿರ್ಮಾಣದ ಅಗತ್ಯವಿದ್ದವರು ಗ್ರಾಮ ಪಂಚಾಯತ್‌ಗಳ ಮೂಲಕ ತಮ್ಮ ಪಟ್ಟಿಯನ್ನು ಕೊಡಲು ಅವಕಾಶ ಕಲ್ಪಿಸಲಾಗಿದೆ. ಸರಕಾರದಿಂದ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ಐಹೊಳೆ ಹೇಳಿದರು.
ಈಗ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ಇದಲ್ಲದೇ ಇದುವರೆಗೆಶೌಚಾಲಯ ಹೊಂದದೇ ಇರುವ ಕುಟುಂಬಗಳ ಸಮೀಕ್ಷೆ ಕಾರ್ಯ ಆರಂಭವಾಗಿದೆ. ಜ.30 ರೊಳಗೆ ಈ ಸಮೀಕ್ಷೆ ಕಾರ್ಯಪೂರ್ಣಗೊಳಿಸಿ ಅಂತಹ ಕುಟುಂಬಗಳಿಗೆ ಶೌಚಾಲಯ ನಿರ್ಮಾಣಕ್ಕೆ ಹಣ ಸಹಾಯ ಒದಗಿಸಲಾಗುವುದು ಎನ್ನುತ್ತಾರೆ ಸಿಇಒ ರಾಜೇಂದ್ರ ಕೆ.ವಿ. ಸರಕಾರ ಈಗ ಬಿದ್ದಿರುವ ಮನೆಗಳ ನಿರ್ಮಾಣಕ್ಕೆ ಆದ್ಯತೆ ನೀಡಿದ್ದು, ಐದು ಲಕ್ಷ ರೂ. ವರೆಗೆ ಪರಿಹಾರನೀಡುತ್ತಿದೆ. ಸಂತ್ರಸ್ತರು ಇದೇ ಹಣದಲ್ಲಿ ಶೌಚಾಲಯಕಟ್ಟಿಕೊಳ್ಳಬೇಕಾದ ಸ್ಥಿತಿಯಲ್ಲಿದ್ದಾರೆ. ಆದರೆ ಮನೆ ನಿರ್ಮಾಣಕ್ಕೆ ಹಣ ಸಾಕಾಗುವುದಿಲ್ಲ ಎನ್ನುವ ಸಂತ್ರಸ್ತರು ಶೌಚಾಲಯ ಕಟ್ಟಿಕೊಳ್ಳಲು ಮುಂದಾಗುವರೇ ಎಂಬ ಪ್ರಶ್ನೆ ಜಿಲ್ಲಾಡಳಿತವನ್ನು ಕಾಡುತ್ತಿದೆ.
-ಕೇಶವ ಆದಿ