Advertisement

ಚಾ.ನಗರ: ಗ್ರಾಪಂಯಲ್ಲಿ ಪಕ್ಷಗಳ ಬಲಾಬಲ

04:27 PM Jan 01, 2021 | Team Udayavani |

ಚಾಮರಾಜನಗರ: ಜಿಲ್ಲೆಯ 129 ಗ್ರಾಮ ಪಂಚಾಯಿತಿಗಳ ಪೈಕಿ, ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಜಿಲ್ಲೆಯ 76ಗ್ರಾಮ ಪಂಚಾಯಿತಿಗಳಲ್ಲಿ ಬಹುಮತ ಗಳಿಸಿದ್ದು, ಒಟ್ಟು 1135 ಮಂದಿ ಕಾಂಗ್ರೆಸ್‌ ಬೆಂಬಲಿತರು ಜಯಗಳಿಸಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಪಿ. ಮರಿಸ್ವಾಮಿ ತಿಳಿಸಿದ್ದಾರೆ.

Advertisement

ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 26 ಗ್ರಾಮ ಪಂಚಾಯಿತಿಗಳಿದ್ದು, ಇವುಗಳ ಪೈಕಿ 18ರಲ್ಲಿಕಾಂಗ್ರೆಸ್‌ ಬೆಂಬಲಿತ ಸದಸ್ಯರು ಬಹುಮತಗಳಿಸಿದ್ದಾರೆ.ಒಟ್ಟು ಸದಸ್ಯರ ಸಂಖ್ಯೆ 481 ಇದ್ದು 280 ಮಂದಿ ಕಾಂಗ್ರೆಸ್‌ಬೆಂಬಲಿತ ಸದಸ್ಯರು ಆರಿಸಿಬಂದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 40 ಗ್ರಾಮ ಪಂಚಾಯಿತಿಗಳಿದ್ದು, ಇವುಗಳ ಪೈಕಿ 19ರಲ್ಲಿ ಕಾಂಗ್ರೆಸ್‌ಬೆಂಬಲಿತ ಅಭ್ಯರ್ಥಿಗಳು ಬಹುಮತ ಹೊಂದಿದ್ದಾರೆ. ಒಟ್ಟು ಸದಸ್ಯರ ಸಂಖ್ಯೆ 574 ಇದ್ದು, 290 ಸದಸ್ಯರು ಕಾಂಗ್ರೆಸ್‌ ಬೆಂಬಲಿತರಾಗಿದ್ದಾರೆ.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 30 ಗ್ರಾಪಂಗಳಿದ್ದು, ಇವುಗಳಲ್ಲಿ 24ರಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳುಬಹುಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ. ಒಟ್ಟು ಸದಸ್ಯರಸಂಖ್ಯೆ 495 ಇದ್ದು, ಇವರಲ್ಲಿ 295 ಮಂದಿ ಕಾಂಗ್ರೆಸ್‌ಬೆಂಬಲಿತರಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ 33ಗ್ರಾಮ ಪಂಚಾಯಿತಿಗಳಿದ್ದು, ಇವುಗಳ ಪೈಕಿ 15ರಲ್ಲಿಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಬಹುಮತ ಸಾಧಿಸಿದ್ದಾರೆ. ಒಟ್ಟು ಸದಸ್ಯರ ಸಂಖ್ಯೆ 609 ಇದ್ದು, 270 ಜನಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು ತಿಳಿಸಿದ್ದಾರೆ.

129 ಗ್ರಾಪಂ ಪೈಕಿ 71ರಲ್ಲಿ ಬಿಜೆಪಿ ಬಹುಮತ  :

Advertisement

ಚಾಮರಾಜನಗರ: ಜಿಲ್ಲೆಯ ಒಟ್ಟು 129 ಗ್ರಾಮ ಪಂಚಾಯಿತಿಗಳ ಪೈಕಿ 71ರಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಬಹುಮತ ಗಳಿಸಿದ್ದಾರೆ. 1026 ಮಂದಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಆರ್‌. ಸುಂದರ್‌ ತಿಳಿಸಿದ್ದಾರೆ.

ಚಾಮರಾಜನಗರ ಗ್ರಾಮಾಂತರ ಮಂಡಲದಲ್ಲಿ 26 ಗ್ರಾಪಂಗಳಿದ್ದು, ಇವುಗಳ ಪೈಕಿ 15ರಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತ ಸಾಧಿಸಿದ್ದು, 212 ಸದಸ್ಯರು ಆಯ್ಕೆ ಯಾಗಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಗುಂಡ್ಲುಪೇಟೆ ಮಂಡಲದಲ್ಲಿ 40 ಗ್ರಾಪಂಗಳಿದ್ದು,ಇವುಗಳ ಪೈಕಿ 22ರಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತಪಡೆದಿದ್ದಾರೆ, 298 ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ.

ಕೊಳ್ಳೇಗಾಲ ಗ್ರಾಮಾಂತರ ಮಂಡಲದಲ್ಲಿ 18 ಗ್ರಾಪಂಗಳಿದ್ದು ಇವುಗಳ ಪೈಕಿ 13ರಲ್ಲಿ ಬಿಜೆಪಿ ಬೆಂಬಲಿತರು ಮುನ್ನಡೆ ಸಾಧಿಸಿದ್ದಾರೆ. 163 ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ. ಯಳಂದೂರು ಮಂಡಲದಲ್ಲಿ 12 ಗ್ರಾಪಂಗಳಿದ್ದು, ಇವುಗಳ ಪೈಕಿ 8 ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತರು ಬಹುಮತ ಪಡೆದಿದ್ದಾರೆ. 86 ಮಂದಿ ಬಿಜೆಪಿ ಬೆಂಬಲಿತ ಸದಸ್ಯರು ಆರಿಸಿಬಂದಿದ್ದಾರೆ.

ಹನೂರು ಮಂಡಲದಲ್ಲಿ 33 ಗ್ರಾಪಂಗಳಿದ್ದು, ಇವುಗಳಲ್ಲಿ 13ರಲ್ಲಿ ಬಿಜೆಪಿ ಬೆಂಬಲಿತರು ಮುನ್ನಡೆ ಸಾಧಿಸಿದ್ದಾರೆ. 267 ಮಂದಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next