ನವ ದೆಹಲಿ : ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಪಕ್ಷಗಳ ನಾಯಕರನ್ನು ಭೇಟಿ ಮಾಡುವ ಉದ್ದೇಶಕ್ಕೆ ರಾಷ್ಟ್ರ ರಾಜಧಾನಿಗ ಭೇಟಿ ನೀಡಿದ ಬೆನ್ನಿಗೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಎಲ್ಲಾ ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಒಂದಾಗಬೇಕು ಎಂದು ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯ ಪ್ರದೀಪ್ ಭಟ್ಟಾಚಾರ್ಯ ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ ಐ ನೊಂದಿಗೆ ಮಾತನಾಡಿದ ಭಟ್ಟಾಚಾರ್ಯ, ಪಶ್ಚಿಮ ಬಂಗಾಳ ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೇಂದ್ರದ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಹೋರಾಡಲು ಪ್ರತಿಪಕ್ಷಗಳಿಗೆ ಆಹ್ವಾನವನ್ನು ನೀಡಿದ್ದಾರೆ. ಈ ಹಿಂದೆ ಅವರು ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಸಭೆ ಕರೆದಿದ್ದರು ಮತ್ತು ಮಲ್ಲಿಕಾರ್ಜುನ್ ಖರ್ಗೆ ಆ ಸಭೆಯಲ್ಲಿ ಭಾಗವಹಿಸಿದ್ದರು. ಅದೇ ಪ್ರಯತ್ನವನ್ನು ಮತ್ತೆ ಮಮತಾ ಈಗ ಮಾಡುತ್ತಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ : ಮೂಳೂರು: ಮೂರು ಮನೆಗಳಲ್ಲಿ ದರೋಡೆ : ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು
ಕಾಂಗ್ರೆಸ್ ನ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಈ ಹಿಂದೆ ಪ್ರತಿಪಕ್ಷಗಳ ಮೈತ್ರಿಗೆ ಹಾಗೂ ಪ್ರಜಾಪ್ರಭುತ್ವದ ವಿರೋಧಿ ಸರ್ಕಾರದ ವಿರುದ್ಧ ನಿಲ್ಲುವುದಕ್ಕೆ ಇಂತದ್ದೇ ಸಭೆಗಳ್ನು ಕರೆದಿದ್ದರು. ಆದರೇ, ಆ ಸಂದರ್ಭದಲ್ಲಿ ಮೈತ್ರಿಗೆ ಟಿ ಎಮ್ ಸಿ ಬಂದಿರಲಿಲ್ಲ, ಈಗ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಗ್ಗಟ್ಟು ಮುಖ್ಯ ಎಂದು ಹೇಳುತ್ತಿದೆ. ಸೋನಿಯಾ ಗಾಂಧಿ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಚುನಾವಣೆಯನ್ನು ಎದುರಿಸಲು ಎಲ್ಲಾ ಪ್ರತಿಪಕ್ಷಗಳು ಒಗ್ಗಟ್ಟಾಗಲೇ ಬೇಕು ಎಂದು ಅವರು ಹೇಳಿದ್ದಾರೆ.
ಏತನ್ಮಧ್ಯೆ, ಮುಂಗಾರು ಅಧಿವೇಶನದ ಬಗ್ಗೆ ಕೇಳಿದ ಪ್ರಶ್ನಗೆ ಉತ್ತರಿಸಿದ ಭಟ್ಟಾಚಾರ್ಯ, ಕೇಂದ್ರ ಸರ್ಕಾರ ಚರ್ಚೆ ಮಾಡಲೇ ಬೇಕಾದ ಎಲ್ಲಾ ವಿಚಾರಗಳನ್ನು ಬದಿಗೊತ್ತಿದೆ. ಇದರಿಂದ ಕೇಂದ್ರ ಸರ್ಕಾರ ಏನು ಮಾಡುವುದಕ್ಕೆ ಹೊರಟಿದೆ ಎನ್ನುವುದು ಗೊತ್ತಿಲ್ಲ. ಪ್ರತಿಪಕ್ಷಗಳಿಗೆ ಚರ್ಚೆ ಮಾಡುವುದಕ್ಕೆ ಕೇಂದ್ರ ಸರ್ಕಾರ ಅನುಮತಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಘಟನೆಗಳ ವಿವರಗಳೊಂದಿಗೆ ಬದುಕನ್ನು ಕಟ್ಟಿಕೊಡುವ ‘ಕಾಲಕೋಶ’