Advertisement

ಅಂಗನವಾಡಿ ತೆರೆದ ನಂತರ ಬಿಸಿಯೂಟ: ಶಶಿಕಲಾ ಜೊಲ್ಲೆ

10:11 PM Feb 03, 2021 | Team Udayavani |

ಬೆಂಗಳೂರು: ಅಂಗನವಾಡಿ ಕೇಂದ್ರಗಳು ತೆರೆದ ನಂತರ ಗರ್ಭಿಣಿ ಮತ್ತು ಬಾಣಂತಿಯರಿಗೆ ಮಾತೃಪೂರ್ಣ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ  ತಿಳಿಸಿದ್ದಾರೆ.

Advertisement

ಇದನ್ನೂ ಓದಿ:4 ವಾರಗಳು ಮಾತ್ರ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ: ಸುಧಾಕರ್

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿಯ ಸಂಜೀವ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್ ನಿಂದಾಗಿ ಅಂಗನವಾಡಿ ಕೇಂದ್ರಗಳು ಮುಚ್ಚಿರುವುದರಿಂದ ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಮನೆ ಬಾಗಿಲಿಗೆ ಕಚ್ಚಾ ಆಹಾರ ಪದಾರ್ಥ ವಿತರಿಸಲಾಗುತ್ತಿದೆ. ಅಂಗನವಾಡಿ ಕೇಂದ್ರ ತೆರೆದ ನಂತರ ಹಿಂದಿನಂತೆ ಬಿಸಿಯೂಟ ಪೂರೈಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next