ಲಕ್ನೋ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸಿದ ಬಳಿಕ ಶುಕ್ರವಾರ (ಸೆ.30) ಮಸೀದಿಗಳಲ್ಲಿ ಪ್ರಾರ್ಥನೆಯ ಹಿನ್ನೆಲೆಯಲ್ಲಿ ಉತ್ತರಪ್ರದೇಶದಾದ್ಯಂತ ಹೈಅಲರ್ಟ್ ಘೋಷಿಸಿದ್ದು, ಎಲ್ಲಾ ಸ್ಥಳಗಳಲ್ಲಿ ನಿಗಾ ಇಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ದೇಶದ್ರೋಹ ಪ್ರಕರಣ: ಶಾರ್ಜಿಲ್ ಇಮಾಮ್ ಗೆ ಜಾಮೀನು ನೀಡಿದ ದೆಹಲಿ ಕೋರ್ಟ್
ಯಾವುದೇ ರೀತಿಯ ಉದ್ನಿಗ್ನ ಸ್ಥಿತಿ ಎದುರಾಗದಂತೆ ಮುಂಜಾಗ್ರತಾ ಕ್ರಮವಾಗಿ ಕಟ್ಟು ನಿಟ್ಟಿನ ಮುನ್ನೆಚ್ಚರಿಕೆ ವಹಿಸುವಂತೆ ಉತ್ತರಪ್ರದೇಶ ಪೊಲೀಸರು ಹೊರಡಿಸಿರುವ ಆದೇಶದಲ್ಲಿ ವಿವರಿಸಿದೆ.
ಮುಂಬರುವ ಹಬ್ಬಗಳ ಹಿನ್ನೆಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಊಹಾಪೋಹದ ಸುದ್ದಿ ಹರಡದಂತೆ ಎಚ್ಚರಿಕೆ ವಹಿಸಬೇಕೆಂದು ಆದೇಶದಲ್ಲಿ ತಿಳಿಸಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ ಪೊಲೀಸ್ ಗಸ್ತು ತಿರುಗುವಂತೆ ನಿರ್ದೇಶನ ನೀಡಲಾಗಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ದೇವಾಲಯ, ಮಸೀದಿಗಳಿರುವ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ವರದಿ ತಿಳಿಸಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಪಿಎಫ್ ಐ ಮತ್ತು 8 ಸಹವರ್ತಿ ಸಂಘಟನೆಗಳನ್ನು ಐದು ವರ್ಷಗಳ ಕಾಲ ನಿಷೇಧಿಸಿ ಅಧಿಸೂಚನೆ ಹೊರಡಿಸಿತ್ತು.