ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದ ನಂತರ ಮಂಗಳವಾರ (ಆಗಸ್ಟ್ 02) ನ್ಯಾಷನಲ್ ಹೆರಾಲ್ಡ್ ಕಚೇರಿಯ ಆವರಣದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಅರಂತೋಡು: ಧಾರಾಕಾರ ಮಳೆ ತಗ್ಗು ಪ್ರದೇಶಗಳ ಮನೆ, ಅಂಗಡಿ ಮುಂಗಟ್ಟುಗಳು ಜಲಾವೃತ
ನ್ಯಾಷನಲ್ ಹೆರಾಲ್ಡ್ ಹೌಸ್ ನ 4ನೇ ಮಹಡಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಇಲ್ಲಿಯೇ ನ್ಯಾಷನಲ್ ಹೆರಾಲ್ಡ್ ಪತ್ರಿಕಾಲಯದ ಕಚೇರಿ ಇದ್ದಿರುವುದಾಗಿ ವರದಿ ಹೇಳಿದೆ.
ನ್ಯಾಷನಲ್ ಹೆರಾಲ್ಡ್ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ವಿವಿಧ ಭಾಗಗಳಲ್ಲಿ ದಾಳಿ ಮುಂದುವರಿದಿದೆ ಎಂದು ಇ.ಡಿ. ಮೂಲಗಳು ತಿಳಿಸಿವೆ. ಕಾಂಗ್ರೆಸ್ ಒಡೆತನದ ನ್ಯಾಶನಲ್ ಹೆರಾಲ್ಡ್ ಪತ್ರಿಕಾಲಯ ಸೇರಿದಂತೆ 12 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ ಎಂದು ವರದಿ ತಿಳಿಸಿದೆ.
ನ್ಯಾಷನಲ್ ಹೆರಾಲ್ಡ್ ಹಣ ದುರುಪಯೋಗ ಪ್ರಕರಣದಲ್ಲಿ ಈ ಮೊದಲು ಕಾಂಗ್ರೆಸ್ ಮುಖಂಡರಾದ ಪವನ್ ಬನ್ಸಾಲ್ ಮತ್ತು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.