ಕೊಚ್ಚಿ: ಇತ್ತೀಚೆಗಷ್ಟೇ ಚಿಕಿತ್ಸೆ ನೀಡುತ್ತಿದ್ದ ಯುವವೈದ್ಯೆಯನ್ನು ವ್ಯಕ್ತಿ ಸಾಯಿಸಿದ್ದ. ಅದರ ವಿರುದ್ಧ ಕೇರಳದಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಮತ್ತೂಂದು ಅನಾಹುತ ತಪ್ಪಿದೆ.
24 ವರ್ಷದ ದೋಯಲ್ ಎಂಬಾತ ವೈದ್ಯರ ಮೇಲೆ ಹಲ್ಲೆ ಮಾಡಲು ಹೋಗಿದ್ದಾರೆ. ಎಡಪಳ್ಳಿ ಸನಿಹದ ವಟ್ಟೆಕುನ್ನಮ್ ವಾಸಿ ದೋಯಲ್ ಅಪಘಾತದಲ್ಲಿ ಗಾಯಗೊಂಡು ಸರ್ಕಾರಿ ವೈದ್ಯಕೀಯ ಕಾಲೇಜೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ವಿಚಿತ್ರವಾಗಿ ವರ್ತಿಸುತ್ತಿದ್ದ ಆತ ವೈದ್ಯರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಕೂಡಲೇ ಆತನನ್ನು ಭದ್ರತಾ ಸಿಬ್ಬಂದಿ ನಿಯಂತ್ರಿಸಿದ್ದಾರೆ.
ಚಿಕಿತ್ಸೆಯ ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ, ಕೊಲ್ಲಂನಲ್ಲಿರುವ ಮ್ಯಾಜಿಸ್ಟ್ರೇಟ್ ಕೋರ್ಟ್ ವೈದ್ಯೆಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಬಂಧಿತನಾದವನನ್ನು ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿ ಆದೇಶ ನೀಡಿದೆ.