Advertisement

ವರದಿ ಬಳಿಕ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ: ಸಿಎಂ ಬೊಮ್ಮಾಯಿ

09:22 PM Nov 08, 2022 | Team Udayavani |

ಚಿತ್ರದುರ್ಗ (ಹೊಸದುರ್ಗ): ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಬಂದಿದೆ. ಆಡಳಿತಾಧಿಕಾರಿ ನೇಮಿಸುವ ಪೂರ್ವದಲ್ಲಿ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯುತ್ತಿದ್ದು, ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಲಾಗಿದೆ.

Advertisement

ವರದಿ ಬಂದ ನಂತರ ನಿರ್ಧರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಾಣೇಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುರುಘಾ ಶ್ರೀಗಳ ಪ್ರಕರಣ ನ್ಯಾಯಾಲಯ
ದಲ್ಲಿ ಇರುವುದರಿಂದ ವ್ಯಾಖ್ಯಾನ ಮಾಡುವುದಿಲ್ಲ. ನ್ಯಾಯಾಲಯ ನಿರ್ಧಾರ ತೆಗೆದುಕೊಳ್ಳುತ್ತದೆ. ಜನ ಸಂಕಲ್ಪ ಯಾತ್ರೆಯಲ್ಲಿ ಜನರೇ ಸೇರುತ್ತಿಲ್ಲ ಎನ್ನುವ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಆಹ್ವಾನ ನೀಡುತ್ತೇನೆ. ಬಂದು ನೋಡಲಿ. ಮಾಧ್ಯಮದಲ್ಲಿ ತೋರಿಸುವ ಜನಸಾಗರವೇ ಉತ್ತರ. ಜನಸಂಕಲ್ಪ ಯಾತ್ರೆ, ವಿಜಯ ಸಂಕಲ್ಪವಾಗಿ ಪರಿವರ್ತನೆಯಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next