Advertisement

ರಾಜೀನಾಮೆ ಬಳಿಕ ಮುಂದಿನ ಕ್ರಮ: ಪರಂ

12:19 AM Apr 27, 2019 | Lakshmi GovindaRaju |

ಬೆಳಗಾವಿ: ರಮೇಶ ಜಾರಕಿಹೊಳಿ ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟ ಬಳಿಕ ಮುಂದೆ ಏನು ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ ಅವರೊಂದಿಗೆ ಚರ್ಚಿಸಿದ್ದು, ಸದ್ಯ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದು ಉಪಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ.

Advertisement

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ರಮೇಶ ಜಾರಕಿಹೊಳಿ ಇನ್ನೂ ಕಾಂಗ್ರೆಸ್‌ನಲ್ಲಿಯೇ ಇದ್ದಾರೆ. ಪಕ್ಷ ಬಿಟ್ಟು ಹೋದ ಬಳಿಕ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದರು. “ರಮೇಶ ರಾಜೀನಾಮೆ ನೀಡುತ್ತೇನೆಂದು ಅನೇಕ ಸಲ ಹೇಳುತ್ತಾ ಬಂದಿದ್ದಾರೆ.

ವರಿಷ್ಠರು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಾನೂ ಬೆಂಗಳೂರಿನಲ್ಲಿ ಭೇಟಿಯಾಗಲು ಪ್ರಯತ್ನಿಸಿದೆ. ಆದರೆ, ಅವರು ಸಿಗಲಿಲ್ಲ. ರಾಜೀನಾಮೆ ನೀಡದಿದ್ದರೆ ಮುಂದೆ ಪಕ್ಷದಲ್ಲಿ ಅವರಿಗೆ ಯಾವ ಕೆಲಸ ಕೊಡಬೇಕು ಎಂಬುದರ ಬಗ್ಗೆ ನಿರ್ಧರಿಸುತ್ತೇವೆ. ಐದು ಬಾರಿ ಕಾಂಗ್ರೆಸ್‌ನಿಂದ ಗೆದ್ದಿರುವ ಸ್ನೇಹಿತ ರಮೇಶನನ್ನು ಕಳೆದುಕೊಳ್ಳಲು ನಮಗೆ ಇಷ್ಟವಿಲ್ಲ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next