Advertisement

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

07:43 PM Sep 25, 2024 | Team Udayavani |

ನವದೆಹಲಿ: ಉತ್ತರಪ್ರದೇಶದ ಬೆನ್ನಲ್ಲೇ ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸರ್ಕಾರ ಅಲ್ಲಿನ ಆಹಾರ ಮಳಿಗೆಗಳಲ್ಲಿ ಮಾಲೀಕರ ವಿವರಗಳನ್ನು ಪ್ರದರ್ಶಿಸುವುದು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

Advertisement

ಪಾರದರ್ಶಕತೆ ಮತ್ತು ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಜಾರಿ ಮಾಡುತ್ತಿರುವುದಾಗಿ ಹೇಳಿದೆ. ಬುಧವಾರದಿಂದ ರಾಜ್ಯಾದ್ಯಂತ ಎಲ್ಲ ಆಹಾರ ಸಂಸ್ಥೆಗಳಲ್ಲಿ ಮಾಲೀಕರು ಮತ್ತು ವ್ಯವಸ್ಥಾಪಕರ ಹೆಸರು, ವಿಳಾಸಗಳನ್ನು ಪ್ರದರ್ಶಿಸಬೇಕು ಎಂದು ಆದೇಶಿಸಲಾಗಿದೆ.

ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯ ಉಪಾಹಾರ ಗೃಹವೊಂದರಲ್ಲಿ ರೊಟ್ಟಿಗಳನ್ನು ತಯಾರಿಸುವಾಗ ಯುವಕನೊಬ್ಬ ಅದರ ಮೇಲೆ ಉಗುಳುತ್ತಿರುವ ವಿಡಿಯೊ ವೈರಲ್‌ ಆಗಿತ್ತು. ಮತ್ತೂಂದು ಕಡೆ ಜ್ಯೂಸ್‌ನಲ್ಲಿ ಮೂತ್ರ ಬೆರೆಸಿದ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಆಹಾರ ಮಳಿಗೆಗಳು ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಸಿಎಂ ಯೋಗಿ ಆದೇಶ ಹೊರಡಿಸಿದ್ದರು.

ಇದನ್ನೂ ಓದಿ: ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

Advertisement

Udayavani is now on Telegram. Click here to join our channel and stay updated with the latest news.

Next