Advertisement

ರಾಕಿ ಭಾಯ್ ಮುಂದಿನ ಚಿತ್ರಕ್ಕೆ ಪುರಿ ಜಗನ್ನಾಥ್ ಆ್ಯಕ್ಷನ್ ಕಟ್ ?

03:47 PM May 23, 2021 | Team Udayavani |

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ಸದ್ಯ ಕೆಜೆಎಫ್-2 ಸಿನಿಮಾ ಬಿಡುಗಡೆ ಎದುರು ನೋಡುತ್ತಿದ್ದಾರೆ. ಈ ಸಿನಿಮಾ ಬಳಿಕ ರಾಕಿ ಭಾಯ್ ಅವರ ಮುಂದಿನ ಪ್ರಾಜೆಕ್ಟ್ ಯಾವುದು ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿದೆ.

Advertisement

ಅಂದ ಹಾಗೆ ಯಶ್ ಅವರ ಮುಂದಿನ ಸಿನಿಮಾ ಯಾವುದು ಎಂಬುದರ ಕುರಿತು ಹೊಸ ಅಪ್ಡೇಟ್ ಸಿಕ್ಕಿದೆ. ಮೂಲಗಳ ಪ್ರಕಾರ ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರು ಯಶ್ ಅವರ ಮುಂದಿನ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರಂತೆ.

ಯಾವಾಗ ಸೆಟ್ಟೇರುತ್ತೆ ?

ಯಶ್ ಹಾಗೂ ಪುರಿ ಜಗನ್ನಾಥ್ ಕಾಂಬಿನೇಶನ್ನಿನ ಈ ಸಿನಿಮಾ ಯಾವಾಗ ಸೆಟ್ಟೇರಲಿದೆ ಎಂಬುದಕ್ಕೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಜಗನ್ನಾಥ್ ಅವರು ಲೈಗರ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಹಾಗೂ ಬಾಲಿವುಡ್ ನಟಿ ಅನನ್ಯ ಪಾಂಡೆ ಅಭಿನಯಿಸುತ್ತಿದ್ದಾರೆ. ಬಾಲಿವುಡ್ ನ ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ ಸಂಸ್ಥೆ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಸಿನಿಮಾ ಮುಗಿದ ಮೇಲೆ ಯಶ್ ಅವರ ಜೊತೆಗಿನ ಸಿನಿಮಾ ಶುರುವಾಗಲಿದೆಯಂತೆ.

ಇದು ಪ್ಯಾನ್ ಇಂಡಿಯಾ ಸಿನಿಮಾ :

Advertisement

ಇನ್ನು ಈ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆಯಂತೆ. ಕನ್ನಡ, ತೆಲುಗು ಸೇರಿದಂತೆ ಬಹುಭಾಷೆಯಲ್ಲಿ ಈ ಚಿತ್ರ ಸಿದ್ಧವಾಗಲಿದೆಯಂತೆ.

Advertisement

Udayavani is now on Telegram. Click here to join our channel and stay updated with the latest news.

Next