Advertisement
ನೈಸ್ ಅಕ್ರಮದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಮತ್ತೆ ಹೋರಾಟ ಪ್ರಾರಂಭವಾಗಲಿದೆ ಎಂದು ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡ ಗುಡುಗಿದ್ದಾರೆ.
Related Articles
Advertisement
ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ನೈಸ್ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದ್ದರು. ಆಗ ಬಿಜೆಪಿಯವರುವಿರೋಧಿಸಿದರು. ಇದೀಗ ದೊಡ್ಡದಾಗಿ ಮಾತನಾಡುತ್ತಿದ್ದಾರೆ. ನಾವು ನೈಸ್ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು. ಬಿಬಿಎಂಪಿಯಲ್ಲಿ ಬೆಂಬಲ ವಾಪಸ್ ಪಡೆಯುವುದಿಲ್ಲ. ಆದರೂ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡೋದು ನಿಶ್ಚಿತ.
– ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ ಅಶೋಕ್ ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದರಿಂದ ಯಾವುದೇ ಮುಜುಗರ ಇಲ್ಲ. ಖೇಣಿ ಯಾವುದೇ ಷರತ್ತು ಇಲ್ಲದೇ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡುವುದು ಇನ್ನೂ ಖಾತ್ರಿಯಾಗಿಲ್ಲ.
– ಸಿದ್ದರಾಮಯ್ಯ, ಮುಖ್ಯಮಂತ್ರಿ.