ಮೈಸೂರು: ಸಂಬಂಧಿಯಿಂದಲೇ ಅತ್ಯಾ ಚಾರಕ್ಕೆ ಒಳಗಾಗಿರುವ ಸಂತ್ರಸ್ತ ಮಗುವಿನ ಪಾಲನೆ ಮಾಡಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಮತ್ತು ವರದಿ ನೀಡುವ ತಜ್ಞರ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಎಚ್.ಡಿ. ಕೋಟೆ ತಾಲೂಕಿನ ಭೀಮನಕಟ್ಟೆ ಹಾಡಿಯ ಮೂರು ವರ್ಷದ ಮಗುವಿನ ಆರೋಗ್ಯ ವಿಚಾರಿಸುವ ಸಲುವಾಗಿ ಗುರು ವಾರ ನಗರದ ಚೆಲುವಾಂಬ ಆಸ್ಪತ್ರೆಗೆ ಭೇಟಿ ನೀಡಿದರು. ಅನ್ಯಾಯಕ್ಕೆ ಒಳಗಾಗಿ ರುವ ಮಗುವನ್ನು ಸಾಮಾನ್ಯ ವಾರ್ಡಿ ನಲ್ಲಿರಿಸಿ ಚಿಕಿತ್ಸೆ ನೀಡುತ್ತಿರುವುದನ್ನು ಕಂಡು ಕೆಂಡಾಮಂಡಲರಾದರು. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ(ಪೋಕೊÕ) ಉಲ್ಲಂ ಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ಡಿ. ರಂದೀಪ್ ಅವರಿಗೆ ಸೂಚನೆ ನೀಡಿದರು.
ಪೋಕೊ ಕಾಯ್ದೆ ಪ್ರಕಾರ ಸಂತ್ರಸ್ತ ಮಗು ವನ್ನು ಎಲ್ಲಿ ಇರಿಸಬೇಕು? ಸಾಮಾನ್ಯ ವಾರ್ಡ್ ನಲ್ಲಿರಿಸಿರುವ ಮಗುವಿನ ಪೋಷಕ ರಿಂದ ಘಟನೆಗೆ ಕುರಿತು ಮಾಹಿತಿ ಪಡೆಯು ವುದಾದರೂ ಹೇಗೆ? ಈ ಕಾಯ್ದೆ ಪ್ರಕಾರ ಅನ್ಯಾಯಕ್ಕೆ ಒಳಗಾಗಿರುವ ಮಗುವಿನ ಗುರುತು ಗೊತ್ತಾಗಬಾರದು, ನೀವು ಕಾಯ್ದೆ ಬಗ್ಗೆ ಸರಿಯಾಗಿ ಓದಿದ್ದೀರಾ, ನಿಮಗೆ ಕಾನೂನಿನ ಅರಿವಿದೆಯೇ? ಎಂದು ಅಧಿಕಾರಿ ಗಳನ್ನು ತರಾಟೆಗೆ ತೆಗದುಕೊಂಡರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ ಮಗುವಿನ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಮಗುವನ್ನು ವಿಶೇಷ ಘಟಕದಲ್ಲಿರಿಸಿ ಚಿಕಿತ್ಸೆ ಕೊಡಿಸುವ ಜತೆಗೆ ಕಾನೂನು ಸಲಹೆ ನೀಡಿ ಧೈರ್ಯ ತುಂಬಬೇಕು. ಆದರೆ ಇದನ್ನು ಮಾಡುವಲ್ಲಿ ಇಲ್ಲಿನ ಅಧಿಕಾರಿಗಳು ವಿಫಲ ರಾಗಿದ್ದಾರೆ. ಹೀಗಾಗಿ ಆಸ್ಪತ್ರೆ ಅಧೀಕ್ಷಕರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾಧಿ ಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ.
ಸಂತ್ರಸ್ಥ ಮಗುವಿನ ವೈದ್ಯಕೀಯ ಚಿಕಿತ್ಸೆಗಾಗಿ ಈಗಾಗಲೇ 10 ಸಾವಿರ ರೂ. ಆರ್ಥಿಕ ನೆರವು ನೀಡಲಾಗಿದೆ ಎಂದು ಹೇಳಿದರು. ಜತೆಗೆ ಲೈಂಗಿಕ ದೌರ್ಜನ್ಯಕ್ಕೊಳಗಾಗುವ 14 ವರ್ಷದೊಳಗಿನ ಮಕ್ಕಳಿಗೆ ಸ್ಥೈರ್ಯ ನಿಧಿ ಮತ್ತು ನಿರ್ಭಯಾ ನಿಧಿ ಅಡಿಯಲ್ಲಿ 4.5 ಲಕ್ಷ ರೂ. ಪರಿಹಾರ ನೀಡಬೇಕು. ಹೀಗಾಗಿ ಈ ಪರಿಹಾರವನ್ನು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಈ ಹಣವನ್ನು ಮಗುವಿಗೆ 18 ವರ್ಷ ಆಗುವವರೆಗೂ ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಡುವಂತೆ ತಿಳಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಮಾಜಿ ಸಚಿವೆ ರಾಣಿ ಸತೀಶ್, ವಸುಂಧರಾ ಭೂಪತಿ, ಲೀಲಾ ಸಂಪಿಗೆ, ಜ್ಯೋತಿ, ಪ್ರಭಾ, ಜಿಲ್ಲಾಧಿಕಾರಿ ಡಿ.ರಂದೀಪ್, ಜಿಪಂ ಸಿಇಒ ಪಿ.ಶಿವಶಂಕರ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಸಂಸ್ಥೆಯ ಡೀನ್ ಡಾ.ಬಿ.ಕೃಷ್ಣಮೂರ್ತಿ, ಆಡಳಿತಾಧಿಕಾರಿ ಬಿ.ಜಿ.ಇಂದ್ರಮ್ಮ, ಚೆಲುವಾಂಬ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ರಾಧಾಮಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸವರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಧಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರಭಾ, ವೃತ್ತ ನಿರೀಕ್ಷಕ ಪಿ.ಎಂ. ಹರೀಶ್‌ಕುಮಾರ್ ಹಾಜರಿದ್ದರು.