Advertisement

ಅನಧಿಕೃತ ಧಾರ್ಮಿಕ ಶ್ರದ್ಧಾ ಕೇಂದ್ರಗಳ ತೆರವು

04:48 PM Feb 17, 2020 | Naveen |

ಜಗಳೂರು: ಸಾರ್ವಜನಿಕ ಉದ್ಯಾನವನ ಮತ್ತು ರಸ್ತೆ ಮಧ್ಯೆ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ತೆರವು ಕಾರ್ಯಾಚರಣೆಯನ್ನು ಭಾನುವಾರ ಪಟ್ಟಣ ಪಂಚಾಯತಿ ವತಿಯಿಂದ ಸಾರ್ವಜನಿಕರ ಸಹಕಾರದೊಂದಿಗೆ ನಡೆಸಲಾಯಿತು.

Advertisement

ನ್ಯಾಯಾಲಯದ ಆದೇಶದ ಹಿನ್ನಲೆಯಲ್ಲಿ ಪಟ್ಟಣದ ಅಶ್ವಥ್‌ ರೆಡ್ಡಿ ನಗರದಲ್ಲಿ ರಸ್ತೆಯ ಮಧ್ಯೆ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಚೌಡಮ್ಮ ದೇವಸ್ಥಾನ, ಮಹಬೂಬ್‌ ಸುಭಾನಿ ಕಟ್ಟೆ, ನಾಗರಕಟ್ಟೆ, ಯಲ್ಲಮ್ಮ ದೇವಸ್ಥಾನ ಸೇರಿದಂತೆ ಒಟ್ಟು 4 ದೇವಸ್ಥಾನಗಳನ್ನು ಸಾರ್ವಜನಿಕರ ಮನವೋಲಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತೆರವುಗೊಳಿಸಲಾಯಿತು. ಈ ವೇಳೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಾಜು ಬಣಕಾರ್‌ ಮಾತನಾಡಿ, ನ್ಯಾಯಾಲಯ ಮತ್ತು ಸರಕಾರದ ಆದೇಶಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಅದು ನಮ್ಮ ಕರ್ತವ್ಯವೂ ಆಗಿದೆ. ರಸ್ತೆ ಬದಿ ಮತ್ತು ಮಧ್ಯೆ ಧಾರ್ಮಿಕ ಶ್ರದ್ಧಾ ಕೇಂದ್ರ ನಿರ್ಮಿಸಿರುವುದರಿಂದ ಸಾರ್ವಜನಿಕರಿಗೆ ತೊಂ ದರೆಯಾಗುತ್ತದೆ ಎಂಬ ಕಾರಣದಿಂದ ತೆರವು ಗೊಳಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪಿಎಸ್‌ಐ ಇಮ್ರಾನ್‌ ಬೇಗ್‌, ಪಟ್ಟಣ ಪಂಚಾಯತಿ ಕಂದಾಯ ನಿರೀಕ್ಷಕ ಸಂತೋಷ್‌, ಆರೋಗ್ಯ ನಿರೀಕ್ಷಕ ಕಿಫಾಯತ್‌ ಅಹಮದ್‌, ಕರ ವಸೂಲಿಗಾರ ಪುನಿತ್‌, ರಾಜು, ಪೌರ ಕಾರ್ಮಿಕರು ಹಾಜರಿದ್ದರು. ತಾಲೂಕಿನಲ್ಲಿ 2009ರ ಸೆ.29ರ ನಂತರ ಅನ ಧಿಕೃತವಾಗಿ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಸೂಚನೆಯ ಮೇರೆಗೆ ಸ್ಥಳೀಯ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸರ್ವೇ ನಡೆಸಿ ಅನಧಿಕೃತ ಧಾರ್ಮಿಕ ಕಟ್ಟಡಗಳ ಪಟ್ಟಿ ಸಿದ್ಧಪಡಿಸುವಂತೆ ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ಜ. 8 ರಂದು ಸಭೆ ನಡೆಸಲಾಗಿತು.

Advertisement

Udayavani is now on Telegram. Click here to join our channel and stay updated with the latest news.

Next