Advertisement
ಅಘನಾಶಿನಿ ಕಣಿವೆ ಸಂರಕ್ಷಣಾ ಹೋರಾಟ ಸಮಿತಿ, ಬೇಡ್ತಿ-ಅಘನಾಶಿನಿ ಕೊಳ್ಳ ಸಮಿತಿ, ನೆಲಮಾವು ಮಠ, ಸಿದ್ಧಿವಿನಾಯಕ ದೇವಾಲಯ ಹೇರೂರು ಇವುಗಳ ಸಹಯೋಗದಲ್ಲಿ ಸಮಾವೇಶ ನಡೆಯಲಿದೆ. ಶರಾವತಿ ಅಭಯಾರಣ್ಯಕ್ಕೆ ಅಘನಾಶಿನಿ ಅರಣ್ಯಗಳ ಸೇರ್ಪಡೆ ವಿರೋಧಿಸಿ ನಡೆಯುವ ಈ ಸಭೆ ಮುಂದಿನ ಹೋರಾಟದ ಸ್ವರೂಪ ನಿರ್ಧರಿಸಲಿದೆ. ಸಮಾವೇಶದಲ್ಲಿ ಬೇಡ್ತಿ ಅಘನಾಶಿನಿಕೊಳ್ಳ ಸಂರಕ್ಷಣಾ ಸಮಿತಿ ಗೌರವ ಅಧ್ಯಕ್ಷ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಸಾನ್ನಿಧ್ಯ ನೀಡುವರು. ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸುವರು. ಕುಮಟಾ ಶಾಸಕ ದಿನಕರ ಶೆಟ್ಟಿ, ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ಪ್ರೊ| ಬಿ.ಎಂ. ಕುಮಾರಸ್ವಾಮಿ, ಪ್ರೊ| ಸುಭಾಸ್‌ಚಂದ್ರನ್, ಕೇಶವ ಕೊರ್ಸೆ, ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ. ಅಘನಾಶಿನಿ ಜೊತೆ ಕಾಳಿ ಕಣಿವೆ, ಶರಾವತಿ, ಬೇಡ್ತಿ ಕಣಿವೆ ಪ್ರದೇಶದ ಹೋರಾಟದ ಪ್ರಮುಖರನ್ನೂ ಸಭೆಗೆ ಆಹ್ವಾನಿಸಲಾಗಿದೆ ಎಂದು ಅಘನಾಶಿನಿ ಕಣಿವೆ ಸಂರಕ್ಷಣಾ ಹೋರಾಟ ಸಮಿತಿ ತಿಳಿಸಿದೆ. ಇಡೀ ಪಶ್ಚಿಮ ಘಟ್ಟದಲ್ಲಿ ಭಾರೀ ವಿರೋಧ ಎದುರಿಸುತ್ತಿರುವ ಲಿಂಗನಮಕ್ಕಿ ನೀರು ಬೆಂಗಳೂರಿಗೆ ಸಾಗಿಸುವ ಯೋಜನೆ, ಬೇಡ್ತಿ-ವರದಾ, ಅಘನಾಶಿನಿ-ವರದಾ, ಅಘನಾಶಿನಿ-ಬೆಂಗಳೂರು, ಕಾಳಿ- ಘಟಪ್ರಭಾ ಮುಂತಾದ ಯೋಜನೆಗಳ ಕುರಿತೂ ಧ್ವನಿ ಎತ್ತಲಾಗುತ್ತಿದೆ ಎಂದು ಸಮಿತಿ ವಿವರಿಸಿದೆ. ಅಘನಾಶಿನಿ ಉಳಿಸಿ ಸಮಾವೇಶ ಪೂರ್ವಭಾವಿಯಾಗಿ ನಗರದಲ್ಲಿ ಪರಿಸರ ಕಾರ್ಯಕರ್ತರ ಸಭೆ ನಡೆಯಿತು. ಸಮಾವೇಶದಲ್ಲಿ ಪಾಲ್ಗೊಳ್ಳಲು ನಾಗರಿಕರಿಗೆ ಮನವಿ ಮಾಡಲಾಯಿತು. ಸಿದ್ದಾಪುರ ತಾಲೂಕಿನ ಜನಪ್ರತಿನಿಧಿಗಳು ಅಭಯಾರಣ್ಯಕ್ಕೆ ಅಘನಾಶಿನಿ ಸೇರ್ಪಡೆ ವಿರೋಧಿಸಿ ನಿರ್ಣಯ ಕೈಗೊಂಡಿದ್ದಾರೆ ಎಂದು ಹೋರಾಟ ಸಮಿತಿ ಕಾರ್ಯದರ್ಶಿ ಮಹಾಬಲೇಶ್ವರ ಹೆಗಡೆ ತಿಳಿಸಿದರು.
Related Articles
Advertisement