ಬೆಂಗಳೂರು: ಅಗ್ನಿಪಥ ಯೋಜನೆಯಡಿ ವಯೋಮಿತಿಯನ್ನು 21 ರಿಂದ 23 ಕ್ಕೆ ಏರಿಸುವ ಮೂಲಕ ಮೋದಿ ಸರ್ಕಾರವು ಜನರ ಅಗತ್ಯಗಳಿಗೆ ಸ್ಪಂದಿಸುವ ಸರ್ಕಾರ ಎಂದು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ರಕ್ಷಣಾ ಪಡೆಗಳಿಗೆ ನೇಮಕಾತಿ ನಡೆದಿರಲಿಲ್ಲ. ಮೊದಲ ವರ್ಷದ ನೇಮಕಾತಿಯಲ್ಲಿ ವಯೋಮಿತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಚ್ಚಿಸಿದ್ದಾರೆ. ಈ ನಿರ್ಧಾರದಿಂದ ದೊಡ್ಡ ಸಂಖ್ಯೆಯಲ್ಲಿ ಯುವ ಜನರಿಗೆ ಪ್ರಯೋಜನವಾಗಲಿದೆ. ತಾಯ್ನಾಡಿನ ಸೇವೆಯ ಪಥದಲ್ಲಿ ಯಶಸ್ವಿಯಾಗಿ ನಡೆದು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲಿದ್ದಾರೆ. ದೇಶದ ಯುವಜನರ ಪರವಾಗಿ ಪ್ರಧಾನಮಂತ್ರಿಗಳಿಗೆ ಟ್ವೀಟ್ ಮೂಲಕ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ತಿಳಿಸಿದ್ದಾರೆ.
ಜಿಎಸ್ ಟಿ ಯ ಸಚಿವರ ಗ್ರೂಪ್ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಜಿ ಎಸ್ ಟಿ ಯ ಸಚಿವರ ಗ್ರೂಪ್ ನ ಸಭೆ ಶುಕ್ರವಾರ ದೆಹಲಿಯಲ್ಲಿ ನಡೆಯಿತು. ಕರ್ನಾಟಕ ಭವನದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಭೆ ನಡೆಸಿದರು. ಸಭೆಯಲ್ಲಿ ವಿವಿಧ ರಾಜ್ಯಗಳ ಸಚಿವರು, ರಾಜ್ಯದ ಹಣಕಾಸು ಇಲಾಖೆ ಎಸಿಎಸ್ ಐಎನ್ಎಸ್ ಪ್ರಸಾದ್ , ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ , ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ. ಶಿಖಾ ಸೇರಿದಂತೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.