ಬೆಳಗಾವಿ: ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ರೈಲ್ವೆ ನಿಲ್ದಾಣ ಸುತ್ತಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ನಗರದಲ್ಲಿ ಪ್ರತಿಭಟನೆ ನಡೆಸಲು ಯಾರೂ ಪ್ರವೇಶಿಸದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸರು ನಿಂತಿದ್ದಾರೆ. ಪ್ರತಿಭಟನಾಕಾರರು ನಗರದಲ್ಲಿ ನುಸುಳದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಪೊಲೀಸ್ ಕಮೀಷನರ್ ಡಾ. ಎಂ.ಬಿ. ಬೋರಲಿಂಗಯ್ಯ, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ, ಕ್ರೈಂ ಡಿಸಿಪಿ ಪಿ.ವಿ.ಸ್ನೇಹಾ, ಎಸಿಪಿ, ಇನ್ಸಪೆಕ್ಟರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ ಮಾಡಿದ್ದಾರೆ. ಅಹಿತಕರ ಘಟನೆ ತಡೆಯಲು ಡ್ರೋಣ್ ಕ್ಯಾಮರಾ ಕಣ್ಗಾವಲು ಇಡಲಾಗಿದೆ.
ಇದನ್ನೂ ಓದಿ:ಈ ದೇಶದಲ್ಲಿ ಯಾರೂ ವಿಕ್ಟೋರಿಯಾ ರಾಣಿಯಾಗಲಿ, ರಾಜನಾಗಲಿ ಇಲ್ಲ: ರಾಹುಲ್ ಗೆ ಬಿಜೆಪಿ ತಿರುಗೇಟು
ನಗರದ ಚನ್ನಮ್ಮ ವೃತ್ತ, ಅಶೋಕ ವೃತ್ತ, ಬೋಗಾರವೇಸ್, ಗೋವಾವೇಸ್, ಕ್ಯಾಂಪ್ ಪ್ರದೇಶ, ಆರ್ ಪಿಡಿ ಕ್ರಾಸ್, ಪೀರನವಾಡಿ ನಾಕಾ ಸೇರಿದಂತೆ ಹಲವೆಡೆ ನಾಕಾಬಂದಿ ಹಾಕಲಾಗಿದೆ.