Advertisement

ಹಾವೇರಿ: ಅಗ್ನಿವೀರರ ಆಯ್ಕೆ ಪ್ರಕ್ರಿಯೆ ಆರಂಭ

11:14 PM Sep 01, 2022 | Team Udayavani |

ಹಾವೇರಿ: ಅಗ್ನಿಪಥ್‌ ನೇಮಕಾತಿ ಯೋಜನೆಯಡಿ ಅಗ್ನಿವೀರರ ಆಯ್ಕೆ ಪ್ರಕ್ರಿಯೆ ಗುರುವಾರದಿಂದ ಆರಂಭಗೊಂಡಿದೆ.

Advertisement

20 ದಿನಗಳ ಕಾಲ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಅಗ್ನಿಪಥ್‌ ಆಯ್ಕೆ ಪ್ರಕ್ರಿಯೆ ಮೊದಲ ದಿನ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ 1,252 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಎರಡನೇ ದಿನವಾದ ಶುಕ್ರವಾರ ಧಾರವಾಡ ಜಿಲ್ಲೆಯ 2,538 ಅಭ್ಯರ್ಥಿಗಳು ಭಾಗವಹಿಸಲು ನೋಂದಾಯಿಸಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅಗ್ನಿಪಥ್‌ ನೇಮಕಾತಿ ಆಯ್ಕೆ ಪ್ರಕ್ರಿಯೆ ಹಾಗೂ ವ್ಯವಸ್ಥೆ ಕುರಿತಂತೆ ಗುರುವಾರ ಬೆಳಗ್ಗೆ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಅಗ್ನಿವೀರರ ಆಯ್ಕೆಗಾಗಿ ರಾಜ್ಯದ 11 ಜಿಲ್ಲೆಗಳಿಂದ 58,218 ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಹೆಸರು ನೋಂದಾಯಿಸಿಕೊಂಡಿದ್ದಾರೆ. ಪ್ರತಿದಿನ ಯಾವ ಯಾವ ಜಿಲ್ಲೆ, ಯಾವ ಅಭ್ಯರ್ಥಿಗಳು ಹಾಜರಾಗಬೇಕೆಂಬ ಮಾಹಿತಿಯನ್ನು ನೇಮಕಾತಿ ಪ್ರಾಧಿ ಕಾರದಿಂದ ನೀಡಲಾಗಿದೆ. ಮೊದಲ ದಿನ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 1,857 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 1,225 ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. 104 ಜನ ರನ್ನಿಂಗ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಮುಂದಿನ ಸುತ್ತಿನ ಪರೀಕ್ಷೆಗಳಿಗೆ ಹಾಜರಾಗಿದ್ದಾರೆ. ಈ ಅಭ್ಯರ್ಥಿಗಳಿಗೆ ಶುಕ್ರವಾರ ಬೆಳಗ್ಗೆ ವೈದ್ಯಕೀಯ ಪರೀಕ್ಷೆ ನಡೆಯಲಿದೆ ಎಂದರು.

ಉಚಿತ ಊಟ, ವಸತಿ ಸೌಕರ್ಯ  :

ಸೇನೆಗೆ ಕರ್ನಾಟಕದಿಂದ ಹೆಚ್ಚು ಜನ ಆಯ್ಕೆಯಾಗಬೇಕು. ದೇಶ ಸೇವೆಗೆ ಸೇರುವ ಅಭ್ಯರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಾವೇರಿಯ ಸಂಘ-ಸಂಸ್ಥೆಗಳು, ಕಲ್ಯಾಣ ಮಂಟಪ, ಸಮುದಾಯ ಭವನದ ಮಾಲಕರು, ಸಾರ್ವಜನಿಕರು ಉಚಿತವಾಗಿ ವಸತಿ ಸೌಕರ್ಯ ಹಾಗೂ ಊಟ-ಉಪಾಹಾರ ನೀಡಲು ಮುಂದೆ ಬಂದಿದ್ದಾರೆ. ಈ ಎಲ್ಲರಿಗೂ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸುತ್ತೇನೆ.  ಪ್ರತಿ ವಸತಿ ವ್ಯವಸ್ಥೆ ಸ್ಥಳದಲ್ಲಿ ಜಿಲ್ಲಾಮಟ್ಟದ ಅ ಧಿಕಾರಿಗಳನ್ನು ನೋಡಲ್‌ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

Advertisement

ನೇಮಕಾತಿ ವಿಭಾಗದ ಕರ್ನಲ್‌ ಅನುಜ್‌ ಗುಪ್ತಾ, ಮೇಜರ್‌ ಅನೀಲ್‌, ಜಿಪಂ ಸಿಇಒ ಮಹಮ್ಮದ್‌ ರೋಷನ್‌, ಎಸ್‌ಪಿ ಹನುಮಂತ ರಾಯ, ಎಎಸ್‌ಪಿ ವಿಜಯಕುಮಾರ ಸಂತೋಷ್‌, ಉಪವಿಭಾಗಾಧಿ ಕಾರಿ ಶಿವಾನಂದ ಉಳ್ಳೆಗಡ್ಡಿ, ಯುವಜನ ಸೇವಾ ಮತ್ತು ಕ್ರೀಡಾಧಿ ಕಾರಿ ಲತಾ ಇತರ ಅಧಿ ಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next