Advertisement
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ, ಅಲ್ಲಿ ತೆಗೆದುಕೊಳ್ಳುವ ನಿರ್ಣಯವನ್ನು ಶಿಫಾರಸಿನ ಮಾದರಿಯಲ್ಲಿ ಕೇಂದ್ರ ಪರಿಸರ ಸಚಿವಾಲಯಕ್ಕೆ ಕಳುಹಿಸಿಕೊಡಲಾಗುವುದು ಎಂದು ರಾಜ್ಯದ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
Related Articles
Advertisement
ಇನ್ನು 78.62 ಚ.ಕಿ.ಮೀ. ವಿಸ್ತೀರ್ಣವಿರುವ ಕಾಮಸಂದ್ರ ವನ್ಯಜೀವಿ ಧಾಮದ 93.27 ಚದರ ಕಿ.ಮೀ.ಅನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಸೇರಿ 643.39 ಚದರ ಕಿ.ಮೀ. ಇರುವ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದ 573.97 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿಸಲು ಪ್ರಸ್ತಾಪಿಸಲಾಗಿದೆ.
ಅದೇ ರೀತಿ ಅಣಶಿ ರಾಷ್ಟ್ರೀಯ ಉದ್ಯಾನ, ದಾಂಡೇಲಿ ವನ್ಯಜೀವಿಧಾಮಗಳ 669.06 ಚದರ ಕಿಲೋಮೀಟರ್ ವ್ಯಾಪ್ತಿ ಮತ್ತು ಕಾವೇರಿ ವಿಸ್ತರಿತ ವನ್ಯಜೀವಿಧಾಮದ 145.369 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ ವಲಯವಾಗಿ ಘೋಷಿಸುವ ಪ್ರಸ್ತಾಪವಿದೆ.