Advertisement

ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪನೆಗೆ ಒಪ್ಪಂದ

05:49 PM Feb 03, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ. ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಹಿ ಮಾಡಲಾಯಿತು.

Advertisement

ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು ಎಸ್ಕಾಂಗಳೊಂದಿಗೆ ಸಮನ್ವಯ ವಹಿಸಲಿವೆ.

ಎಥರ್ ಎನರ್ಜಿ ಕಂಪನಿಯು ವಿದ್ಯುತ್ ದ್ವಿಚಕ್ರ ವಾಹನಗಳಿಗೆ ಉಚಿತವಾಗಿ ಚಾರ್ಜಿಂಗ್ ಸೌಲಭ್ಯಗಳನ್ನು ಕಲ್ಪಿಸಲಿವೆ.

ಎಥರ್ ಎನರ್ಜಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ತರುಣ್ ಮೆಹ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಈ ಒಪ್ಪಂದಕ್ಕೆ ಸಹಿ ಮಾಡಿದರು.

ಶಾಸಕ ಅರವಿಂದ ಬೆಲ್ಲದ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next